Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:3 - ಕನ್ನಡ ಸಮಕಾಲಿಕ ಅನುವಾದ

3 ಅವರು ನನ್ನನ್ನು ಅಲ್ಲಿಗೆ ತಂದಾಗ, ಅಲ್ಲಿ ಕಂಚಿನಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲೂ ಅಳತೆಯ ಕೋಲೂ ಇತ್ತು. ಅವನು ಬಾಗಿಲಲ್ಲೇ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಮೇಲೆ ಆತನು ನನ್ನನ್ನು ಅಲ್ಲಿಗೆ ತಂದಾಗ, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ನೂಲನ್ನು, ಅಳತೆಯ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲೇ ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ನನ್ನನ್ನು ಅಲ್ಲಿಗೆ ತರಲು, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ಹುರಿಯನ್ನೂ ಅಳತೆ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ನನ್ನನ್ನು ಅಲ್ಲಿಗೆ ತರಲು ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ಹುರಿಯನ್ನೂ ಅಳತೇಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ನನ್ನನ್ನು ಅಲ್ಲಿಗೆ ಕರೆತಂದನು. ಅಲ್ಲಿ ಒಬ್ಬನು ತಾಮ್ರದಂತೆ ಹೊಳೆಯುತ್ತಿದ್ದನು. ಅವನ ಕೈಯಲ್ಲಿ ಅಳತೆಯ ನೂಲೂ, ಅಳತೆಯ ಕೋಲೂ ಇದ್ದವು. ಅವನು ದ್ವಾರದ ಬಳಿಯಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:3
14 ತಿಳಿವುಗಳ ಹೋಲಿಕೆ  

ದಂಡದಂತಿದ್ದ ಒಂದು ಅಳತೆ ಕೋಲು ನನಗೆ ಕೊಡಲಾಯಿತು. ನನಗೆ ಹೀಗೆ ಹೇಳಲಾಯಿತು: “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡಿ, ಆಲಯದಲ್ಲಿ ಆರಾಧನೆ ಮಾಡುವವರನ್ನು ಎಣಿಸು.


ಕೈಯಲ್ಲಿ ಅಳತೆಮಾಡುವ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು. ಅಲ್ಲಿ ನೀರು ಪಾದ ಮುಳುಗುವಷ್ಟಿತ್ತು.


ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.


ಅವರ ಪಾದಗಳು ಕುಲುಮೆಯಲ್ಲಿ ಹೊಳೆಯುವ ತಾಮ್ರದಂತೆಯೂ ಅವರ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.


ಅವುಗಳ ಕಾಲುಗಳು ನೆಟ್ಟಗಿದ್ದು, ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು, ಕಂಚಿಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.


ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಲೋಹವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತ ಕಾಂತಿಯನ್ನು ನಾನು ಕಂಡೆನು.


ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ಆಮೇಲೆ, ಆ ಮನುಷ್ಯನು ನನ್ನನ್ನು ದೇವಾಲಯಕ್ಕೆ ಕರೆತಂದು ಕಂಬಗಳನ್ನು ಎರಡೂ ಕಡೆಯಲ್ಲಿ ಸುಮಾರು 3.2 ಮೀಟರ್ ಎಂದು ಅಳೆದನು. ಇದೇ ಆ ಗುಡಾರದ ಉದ್ದಗಲವಾಗಿತ್ತು.


ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುಮಾರು 265 ಮೀಟರ್ ಆಗಿತ್ತು.


ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವುದನ್ನು ಕೇಳಿದೆನು. ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿದ್ದನು.


ಇಗೋ, ನಾನು ನೋಡುತ್ತಿದ್ದಂತೆ ಬೆಂಕಿ ಉರಿಯುತ್ತದೋ ಎಂಬಂತೆ ಮನುಷ್ಯಾಕೃತಿಯೊಂದು ಕಾಣಿಸಿತು. ಸೊಂಟದ ಕೆಳಗಿನ ರೂಪವು ಬೆಂಕಿಯಂತಿತ್ತು ಮತ್ತು ಅವನ ಸೊಂಟದ ಮೇಲಿನ ಭಾಗವು ಹೊಳೆಯುವ ಲೋಹದಂತೆ ಪ್ರಕಾಶಮಾನವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು