ಯೆಹೆಜ್ಕೇಲನು 40:4 - ಕನ್ನಡ ಸಮಕಾಲಿಕ ಅನುವಾದ4 ಆ ಮನುಷ್ಯನು ನನಗೆ, “ಮನುಷ್ಯಪುತ್ರನೇ ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ಮತ್ತು ನಾನು ತೋರಿಸುವ ಎಲ್ಲಾ ಸಂಗತಿಗಳಿಗೆ ನೀನು ಮನಸ್ಸಿಡು. ನಾನು ನಿನಗೆ ಅವುಗಳನ್ನೆಲ್ಲಾ ತೋರಿಸುವುದಕ್ಕಾಗಿಯೇ ಇಲ್ಲಿಗೆ ನಿನ್ನನ್ನು ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ಜನರಿಗೆ ತಿಳಿಸು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಪುರುಷನು ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಪುರುಷ ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ನಿನ್ನನ್ನು ಇಲ್ಲಿಗೆ ತರಲಾಗಿದೆ; ನೀನು ನೋಡುವುದನ್ನೆಲ್ಲ ಇಸ್ರಯೇಲ್ ವಂಶದವರಿಗೆ ಪ್ರಕಟಿಸು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಪುರುಷನು ನನಗೆ - ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವದನ್ನು ನೀನು ನೋಡಬೇಕೆಂದೇ ಇಲ್ಲಿಗೆ ತರಲ್ಪಟ್ಟಿ; ನೀನು ನೋಡುವದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಅವನು ಹೀಗೆ ಹೇಳಿದನು, “ನರಪುತ್ರನೇ, ನೀನು ನಿನ್ನ ಕಣ್ಣು, ಕಿವಿಗಳನ್ನು ಉಪಯೋಗಿಸು, ಇವೆಲ್ಲವನ್ನೂ ಗಮನಿಸಿ ನನ್ನ ಮಾತುಗಳನ್ನು ಕೇಳು. ನಾನು ತೋರಿಸುವ ಪ್ರತಿಯೊಂದು ವಸ್ತುಗಳ ಮೇಲೆ ಚೆನ್ನಾಗಿ ಲಕ್ಷ್ಯವಿಡು. ಯಾಕೆಂದರೆ ಈ ವಿಷಯಗಳನ್ನು ನಿನಗೆ ತೋರಿಸಬೇಕೆಂದೇ ನಿನ್ನನ್ನು ಇಲ್ಲಿಗೆ ತಂದಿರುವೆ. ನೀನು ನೋಡಿದ್ದೆಲ್ಲವನ್ನೂ ಇಸ್ರೇಲ್ ವಂಶದವರಿಗೆ ತಿಳಿಸಬೇಕು.” ಅಧ್ಯಾಯವನ್ನು ನೋಡಿ |