ಯೆಹೆಜ್ಕೇಲನು 40:44 - ಕನ್ನಡ ಸಮಕಾಲಿಕ ಅನುವಾದ44 ಅನಂತರ ಅವನು ನನ್ನನ್ನು ಒಳಗಿನ ಪ್ರಾಕಾರಕ್ಕೆ ಕರೆತಂದರು. ಅಲ್ಲಿ ಎರಡು ಕೊಠಡಿಗಳು ಇದ್ದವು. ಒಂದು ಉತ್ತರದ ಬಾಗಿಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಿಲಿನ ಕಡೆಗೆ ಉತ್ತರಕ್ಕೆ ಅಭಿಮುಖವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆ ಮೇಲೆ ಅವನು ನನ್ನನ್ನು ಒಳಗಣ ಅಂಗಳಕ್ಕೆ ಕರೆ ತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರದ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ಒಂದು ಕೋಣೆಯು ಉತ್ತರಕ್ಕೂ, ಇನ್ನೊಂದು ಕೋಣೆಯು ದಕ್ಷಿಣಕ್ಕೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಆಮೇಲೆ ಆ ಪುರುಷ ನನ್ನನ್ನು ಒಳಗಣ ಪ್ರಾಕಾರಕ್ಕೆ ಕರೆದುತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ದಕ್ಷಿಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆ ಉತ್ತರಕ್ಕೆ ಅಭಿಮುಖವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಆಮೇಲೆ ಅವನು ನನ್ನನ್ನು ಒಳಗಣ ಪ್ರಾಕಾರಕ್ಕೆ ಕರತಂದನು; ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು; ಬಡಗಣ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ತೆಂಕಲಿಗೆ ಅಭಿಮುಖವಾಗಿತ್ತು; ತೆಂಕಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆಯು ಬಡಗಲಿಗೆ ಅಭಿಮುಖವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಒಳಗಿನ ಪ್ರಾಕಾರದಲ್ಲಿ ಎರಡು ಕೋಣೆಗಳಿದ್ದವು. ಒಂದು ಉತ್ತರದ ದ್ವಾರದ ಬಳಿಯಲ್ಲಿ ದಕ್ಷಿಣಕ್ಕೆ ಅಭಿಮುಖವಾಗಿತ್ತು. ಇನ್ನೊಂದು ದಕ್ಷಿಣದ ದ್ವಾರದ ಬಳಿಯಲ್ಲಿದ್ದು ಉತ್ತರಕ್ಕೆ ಅಭಿಮುಖವಾಗಿತ್ತು. ಅಧ್ಯಾಯವನ್ನು ನೋಡಿ |