ಯೆಹೆಜ್ಕೇಲನು 40:45 - ಕನ್ನಡ ಸಮಕಾಲಿಕ ಅನುವಾದ45 ಅವನು ನನಗೆ ಹೇಳಿದ್ದೇನೆಂದರೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ದೇವಾಲಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆಗ ಅವನು ನನಗೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಮೇಲ್ವಿಚಾರಣೆಯನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಆಗ ಅವನು ನನಗೆ ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆ ದೇವಾಲಯ ಪಾರುಪತ್ಯವನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಆಗ ಅವನು ನನಗೆ - ತೆಂಕಲಿಗೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಪಾರುಪತ್ಯವನ್ನು ನಡಿಸುವ ಯಾಜಕರಿಗೆ ನೇಮಕವಾಗಿದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಅವನು, “ದಕ್ಷಿಣಕ್ಕೆ ಅಭಿಮುಖವಾಗಿದ್ದ ಕೋಣೆಯು, ಆಲಯದಲ್ಲಿ ಯಾಜಕ ಉದ್ಯೋಗ ಮಾಡುತ್ತಿರುವ ಯಾಜಕರಿಗಾಗಿ. ಅಧ್ಯಾಯವನ್ನು ನೋಡಿ |
ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.