ಯೆಹೆಜ್ಕೇಲನು 40:46 - ಕನ್ನಡ ಸಮಕಾಲಿಕ ಅನುವಾದ46 ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಬಲಿಪೀಠದ ಮೇಲ್ವಿಚಾರಕರಾದ ಯಾಜಕರದು. ಚಾದೋಕನ ಪುತ್ರರಾದ ಇವರು ಲೇವಿಯ ಕುಲದವರಲ್ಲಿ ಯೆಹೋವ ದೇವರ ಸನ್ನಿಧಿಯ ಸೇವಕರಾಗಿದ್ದಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆ ಬಲಿಪೀಠದ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಬಡಗಲಿಗೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ; ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಆದರೆ ಉತ್ತರಕ್ಕೆ ಅಭಿಮುಖವಾಗಿರುವ ಕೋಣೆಯು ಯಜ್ಞವೇದಿಯಲ್ಲಿ ಕಾರ್ಯವಹಿಸುತ್ತಿರುವ ಯಾಜಕರಿಗಾಗಿ, ಯಾಜಕರೆಲ್ಲರೂ ಲೇವಿ ಕುಲದವರಾಗಿದ್ದಾರೆ. ಎರಡನೇ ಗುಂಪಿನ ಯಾಜಕರು ಚಾದೋಕನ ಸಂತತಿಯವರಾಗಿದ್ದರು. ಅವರು ಮಾತ್ರವೇ ಯಜ್ಞವೇದಿಯಲ್ಲಿ ಯಜ್ಞಾರ್ಪಣೆ ಮಾಡಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |