ಯೆಹೆಜ್ಕೇಲನು 40:5 - ಕನ್ನಡ ಸಮಕಾಲಿಕ ಅನುವಾದ5 ನಾನು ದೇವಾಲಯದ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದಿರುವ ಒಂದು ಗೋಡೆಯನ್ನು ಕಂಡೆನು. ಆ ಮನುಷ್ಯನ ಕೈಯಲ್ಲಿದ್ದ ಅಳತೆ ಕೋಲು ಸುಮಾರು ಮೂರು ಮೀಟರ್ ಉದ್ದವಿತ್ತು, ಪ್ರತಿಯೊಂದೂ ಒಂದು ಮೀಟರ್ ಮತ್ತು ಒಂದು ಅಂಗೈ ಅಗಲವಾಗಿತ್ತು. ಆ ಮನುಷ್ಯನು ಗೋಡೆಯನ್ನು ಅಳೆದನು. ಅದು ಒಂದು ಕೋಲು ಅಗಲ ಮತ್ತು ಒಂದು ಕೋಲು ಎತ್ತರವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಆರು ಮೊಳ ಉದ್ದದ ಅಳತೆ ಕೋಲು ಇತ್ತು. (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ); ಅವನು ಆ ಗೋಡೆಯ ಅಗಲವನ್ನು ಅಳತೆ ಮಾಡಿದಾಗ ಅದರ ಅಗಲವೂ ಮತ್ತು ಎತ್ತರವೂ ಒಂದೇ ಕೋಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಮೂರು ಮೀಟರ್ ಅಳತೆಕೋಲೊಂದಿತ್ತು. ಆ ಗೋಡೆ ಮೂರು ಮೀಟರ್ ದಪ್ಪ ಹಾಗು ಮೂರು ಮೀಟರ್ ಎತ್ತರ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು; ಆ ಪುರುಷನ ಕೈಯಲ್ಲಿ ಆರು ಉದ್ದಮೊಳದ ಅಳತೇಕೋಲೊಂದಿತ್ತು (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿಯುದ್ದ); ಅವನು ಆ ಗೋಡೆಯ ದಪ್ಪವನ್ನು ಒಂದು ಕೋಲು, ಎತ್ತರವನ್ನು ಒಂದು ಕೋಲು ಅಳೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಲಯದ ಹೊರಗಿನಿಂದ ಸುತ್ತಲೂ ಗೋಡೆ ಇರುವದನ್ನು ನಾನು ಕಂಡೆನು. ಅವನ ಕೈಯಲ್ಲಿ ಅಳತೆಯ ಕೋಲಿತ್ತು. ಅದು ಉದ್ದ ಅಳತೆಯಲ್ಲಿ ಆರು ಮೊಳ ಉದ್ದವಾಗಿತ್ತು. ಅವನು ಗೋಡೆಯ ಅಗಲವನ್ನು ಅಳತೆ ಮಾಡಿದಾಗ, ಅದು ಒಂದು ಕೋಲು ಅಗಲವಾಗಿತ್ತು. ಅವನು ಗೋಡೆಯ ಎತ್ತರವನ್ನು ಅಳತೆ ಮಾಡಿದಾಗ ಅದು ಒಂದು ಕೋಲು ಎತ್ತರವಾಗಿತ್ತು. ಅಧ್ಯಾಯವನ್ನು ನೋಡಿ |