Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:6 - ಕನ್ನಡ ಸಮಕಾಲಿಕ ಅನುವಾದ

6 ಆಮೇಲೆ ಅವನು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಬಾಗಿಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಿಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು, ಮೆಟ್ಟಿಲುಗಳನ್ನು ಹತ್ತಿ, ಹೊಸ್ತಿಲಿನ ಅಗಲವನ್ನು ಅಳೆದನು. ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು ಮೆಟ್ಟಲುಗಳನ್ನು ಹತ್ತಿ ಹೊಸ್ತಿಲಿನ ಅಗಲವನ್ನು ಅಳೆದನು. ಒಂದೊಂದು ಹೊಸ್ತಿಲಿನ ಅಗಲವು ಮೂರು ಮೀಟರ್ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಮೇಲೆ ಅವನು ಮೂಡಣ ಹೆಬ್ಬಾಗಿಲಿಗೆ ಬಂದು ಮೆಟ್ಲುಗಳನ್ನು ಹತ್ತಿ ಹೊಸ್ತಲಿನ ಅಗಲವನ್ನು ಒಂದು ಕೋಲಳೆದನು. ಒಂದೊಂದು ಹೊಸ್ತಲಿನ ಅಗಲವು ಒಂದೊಂದು ಕೋಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನು ಪೂರ್ವದ ದ್ವಾರಕ್ಕೆ ಹೋದನು. ಅವನು ಅದರ ಮೆಟ್ಟಿಲುಗಳ ಬಳಿಗೆ ಹೋಗಿ ದ್ವಾರದ ಅಗಲವನ್ನು ಅಳತೆಮಾಡಿದನು. ಅದು ಒಂದು ಅಳತೆಕೋಲು ಅಗಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:6
24 ತಿಳಿವುಗಳ ಹೋಲಿಕೆ  

ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಿಲಿಗೆ ಕರೆದುಕೊಂಡು ಹೋದನು.


ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು.


ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರಗಿನ ಬಾಗಿಲಿನ ಉದ್ದವನ್ನೂ ಅಗಲವನ್ನೂ ಅಳೆದನು.


ಆಮೇಲೆ ದೇವರಾತ್ಮರು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿಗೆ, ನನ್ನನ್ನು ಎತ್ತಿಕೊಂಡು ಹೋದರು. ಪ್ರವೇಶದ್ವಾರದಲ್ಲಿ ಇಪ್ಪತ್ತೈದು ಮಂದಿ ಮನುಷ್ಯರು ಇದ್ದರು. ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗ ಯಾಜನ್ಯನನ್ನೂ, ಬೆನಾಯನ ಮಗ ಪೆಲಟೀಯನನ್ನೂ ನೋಡಿದೆನು.


ಆಗ ಯೆಹೋವ ದೇವರ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.


ಮುರಿದ ಪಾತ್ರೆಗಳ ಪ್ರವೇಶದ್ವಾರದ ಮೂಲಕ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.


ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.


ಇವರ ಆಚೆ, ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ಆಚೆ, ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.


ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.


ಇವರು ಈವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲಲ್ಲಿ ಕಾದುಕೊಂಡಿದ್ದರು. ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.


ಮಧ್ಯ ಕೊಠಡಿಯ ಬಾಗಿಲು ಆಲಯದ ದಕ್ಷಿಣ ಭಾಗದಲ್ಲಿ ಇತ್ತು. ಅಲ್ಲಿಂದ ಮಧ್ಯ ಕೊಠಡಿಗೂ, ಮಧ್ಯ ಕೊಠಡಿಯಿಂದ ಮೂರನೆಯ ಕೊಠಡಿಗೂ ಹತ್ತಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.


ಆ ಮನುಷ್ಯನು ನನ್ನನ್ನು ಮತ್ತೆ ಆಲಯದ ಬಾಗಿಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು, ಏಕೆಂದರೆ ಆಲಯದ ಮುಂಭಾಗದಲ್ಲಿ ನೀರು ಇತ್ತು. ಆ ನೀರು ಆಲಯದ ದಕ್ಷಿಣಕ್ಕೆ ಕೆಳಗಡೆ ಹರಿಯಿತು.


“ ‘ರಾಜಕುಮಾರನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಯೆಹೋವ ದೇವರಿಗೆ ಸಮರ್ಪಿಸುವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಿಲನ್ನು ಅವನಿಗೆ ತೆರೆಯಬೇಕು. ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಹಾಗೆ ಸಮರ್ಪಣೆಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಿಲನ್ನು ಮುಚ್ಚಬೇಕು.


ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ಧಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು. ಅದು ಮುಚ್ಚಿತ್ತು.


ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ. ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿಬಿಟ್ಟಿದ್ದೇನೆ.


ಅದಕ್ಕೆ ಏರುವ ಹಾಗೆ ಏಳೂ ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು. ಅದರ ಕಂಬಗಳು ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರದಿಂದ ಅಲಂಕರಿಸಲಾಗಿತ್ತು.


ಕಾವಲುಗಾರರ ಕೋಣೆಯ ಉಪವಿಭಾಗಗಳು ಒಂದು ಕೋಲು ಉದ್ದ ಮತ್ತು ಒಂದು ಕೋಲು ಅಗಲವಿದ್ದವು ಮತ್ತು ಕೋಣೆಯ ಉಪವಿಭಾಗಗಳ ನಡುವಿನ ಗೋಡೆಗಳು ಸುಮಾರು ಮೂರು ಮೀಟರ್ ದಪ್ಪವಾಗಿದ್ದವು. ಮತ್ತು ದೇವಾಲಯಕ್ಕೆ ಎದುರಾಗಿರುವ ದ್ವಾರಮಂಟಪದ ಮುಂದಿನ ಹೆಬ್ಬಾಗಿಲಿನ ಹೊಸ್ತಿಲು ಒಂದು ಕೋಲು ಆಳವಾಗಿತ್ತು.


ನಾನು ದೇವಾಲಯದ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದಿರುವ ಒಂದು ಗೋಡೆಯನ್ನು ಕಂಡೆನು. ಆ ಮನುಷ್ಯನ ಕೈಯಲ್ಲಿದ್ದ ಅಳತೆ ಕೋಲು ಸುಮಾರು ಮೂರು ಮೀಟರ್ ಉದ್ದವಿತ್ತು, ಪ್ರತಿಯೊಂದೂ ಒಂದು ಮೀಟರ್ ಮತ್ತು ಒಂದು ಅಂಗೈ ಅಗಲವಾಗಿತ್ತು. ಆ ಮನುಷ್ಯನು ಗೋಡೆಯನ್ನು ಅಳೆದನು. ಅದು ಒಂದು ಕೋಲು ಅಗಲ ಮತ್ತು ಒಂದು ಕೋಲು ಎತ್ತರವಾಗಿತ್ತು.


ಅದರ ಕಿಟಕಿಗಳೂ ಅದರ ಕೈಸಾಲೆಗಳೂ ಅದರ ಖರ್ಜೂರದ ಗಿಡಗಳೂ ಪೂರ್ವ ಕಡೆಯ ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.


ಆಮೇಲೆ ಆತನು ನನ್ನನ್ನು ದಕ್ಷಿಣದ ಕಡೆಗೆ ಕರೆತಂದನು ಅಲ್ಲಿಯೂ ಬಾಗಿಲು ಇತ್ತು, ಅವನು ಅದರ ಕಂಬಗಳನ್ನು ಅದರ ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.


ಹಾಗೆಯೇ ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಿಲುಗಳು ಮತ್ತು ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತುಗಳಲ್ಲಿ ಬಾಗಿಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಕೆಯಾಗಿದ್ದವು. ನೆಲ, ಕಿಟಕಿಯವರೆಗಿನ ಗೋಡೆ ಮತ್ತು ಕಿಟಕಿಗಳನ್ನು ಮುಚ್ಚಲಾಯಿತು.


ಹೀಗೆ ಅವನು ಒಳಗಿನ ಆಲಯದ ಅಳತೆಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಿಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.


ಅದರ ಅಂಚು ನಾಲ್ಕು ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ಅದರ ತಳವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಎದುರಾಗಿರಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು