ಯೆಹೆಜ್ಕೇಲನು 40:9 - ಕನ್ನಡ ಸಮಕಾಲಿಕ ಅನುವಾದ9 ಆಮೇಲೆ ಬಾಗಿಲಿನ ದ್ವಾರಾಂಗಣವನ್ನು ಸುಮಾರು ನಾಲ್ಕು ಮೀಟರ್ ಅದರ ಕಂಬಗಳನ್ನು ಸುಮಾರು ಒಂದು ಮೀಟರ್ ಎಂದು ಅಳೆದನು. ಹೆಬ್ಬಾಗಿಲಿನ ದ್ವಾರಮಂಟಪವು ದೇವಾಲಯಕ್ಕೆ ಎದುರಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯನ್ನು ಎಂಟು ಮೊಳವೆಂದೂ; ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು. ಹೆಬ್ಬಾಗಿಲಿನ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು; ಅದು ನಾಲ್ಕು ಮೀಟರ್ ಇತ್ತು; ನಿಲವು ಕಂಬಗಳ ಅಗಲ ಒಂದೊಂದು ಮೀಟರ್. ಹೆಬ್ಬಾಗಿಲ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು; ಅದು ಎಂಟು ಮೊಳ; ನಿಲವುಕಂಬಗಳ ಅಗಲವು ಎರಡೆರಡು ಮೊಳ; ಹೆಬ್ಬಾಗಿಲ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅದು ಎಂಟು ಮೊಳ ಉದ್ದವಾಗಿತ್ತು. ದ್ವಾರದ ಎರಡು ಬದಿಗಳ ಗೋಡೆಯನ್ನು ಅವನು ಅಳತೆ ಮಾಡಿದನು. ಅವು ಎರಡು ಮೊಳ ಅಗಲವಿದ್ದವು. ಆಲಯಕ್ಕೆ ಎದುರಾಗಿದ್ದ ದ್ವಾರದ ಕೊನೆಯಲ್ಲಿ ಕೈಸಾಲೆಯಿತ್ತು. ಅಧ್ಯಾಯವನ್ನು ನೋಡಿ |