Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:13 - ಕನ್ನಡ ಸಮಕಾಲಿಕ ಅನುವಾದ

13 ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದೂ ಅಳೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಪುರುಷನು ಅಳೆಯಲು, ದೇವಸ್ಥಾನದ ಉದ್ದ ನೂರು ಮೊಳವೂ, ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಪುರುಷ ಅಳೆದಾಗ ದೇವಸ್ಥಾನದ ಉದ್ದ ಐವತ್ತು ಮೀಟರ್, ದೀಕ್ಷಿತರ ಪ್ರಾಕಾರ, ಶಾಲೆಶಾಲೆಯ ಗೋಡೆಗಳು, ಇವುಗಳ ಒಟ್ಟಗಲ ಐವತ್ತು ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಪುರುಷನು ಅಳೆಯಲು ದೇವಸ್ಥಾನದ ಉದ್ದ ನೂರು ಮೊಳವೂ ದೀಕ್ಷಿತರ ಪ್ರಾಕಾರ, ಶಾಲೆ, ಶಾಲೆಯ ಗೋಡೆಗಳು, ಇವುಗಳ ಒಟ್ಟಗಲ ನೂರು ಮೊಳವೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಂತರ ಅವನು ಆಲಯದ ಅಳತೆ ತೆಗೆದನು. ಆಲಯವು ನೂರು ಮೊಳ ಉದ್ದವಾಗಿತ್ತು. ನಿಯಮಿತದ ಸ್ಥಳ, ಅದರ ಕಟ್ಟಡ ಮತ್ತು ಗೋಡೆಯ ಸಹಿತ ನೂರು ಮೊಳ ಉದ್ದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:13
8 ತಿಳಿವುಗಳ ಹೋಲಿಕೆ  

ಹೀಗೆ ಅವನು ಅಂಗಳವನ್ನು ಅಳೆದನು. ಅದರ ಉದ್ದವು ಸುಮಾರು ಐವತ್ತು ಮೀಟರ್, ಅಗಲವು ಸುಮಾರು ಐವತ್ತು ಮೀಟರ್ ಚಚ್ಚೌಕವಾಗಿತ್ತು. ಆ ಬಲಿಪೀಠವು ದೇವಾಲಯದ ಮುಂದೆ ಇತ್ತು.


ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು. ಅದರ ಉದ್ದವು ತೊಂಬತ್ತು ಮೊಳವಾಗಿತ್ತು.


ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು.


ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂಥ ಕಟ್ಟಡವನ್ನು ಅಂದರೆ ಶಾಲೆಗಳನ್ನೂ ಆ ಕಡೆ ಮತ್ತು ಈ ಕಡೆ ನೂರು ಮೊಳವೆಂದೂ ಅಳೆದನು. ಮುಖ್ಯ ಸಭಾಂಗಣ, ಗರ್ಭಗೃಹ ಮತ್ತು ಅಂಗಳದ ಮುಂಭಾಗದಲ್ಲಿ ದ್ವಾರಮಂಟಪ,


ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು.


ಉತ್ತರ ಭಾಗದಲ್ಲಿ ಬಾಗಿಲು ಇದ್ದ ಕಟ್ಟಡವು ಸುಮಾರು ಐವತ್ತೆರಡು ಮೀಟರ್ ಉದ್ದ ಮತ್ತು ಇಪ್ಪತ್ತಾರು ಮೀಟರ್ ಅಗಲವಿತ್ತು.


ಏಕೆಂದರೆ ಹೊರಗಿನ ಅಂಗಳದಲ್ಲಿದ್ದ ಕೊಠಡಿಗಳ ಉದ್ದವು ಐವತ್ತು ಮೊಳ ಉದ್ದವಾಗಿಯೂ ಮತ್ತು ದೇವಾಲಯದ ಮುಂದೆ ನೂರು ಮೊಳಗಳಿದ್ದವು.


ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು