ಯೆಹೆಜ್ಕೇಲನು 43:18 - ಕನ್ನಡ ಸಮಕಾಲಿಕ ಅನುವಾದ18 ಅವರು ನನಗೆ ಹೇಳಿದ್ದೇನೆಂದರೆ: “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಬಲಿಪೀಠವನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಆ ಪುರುಷನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಆ ಪುರುಷ ನನಗೆ ಹೀಗೆ ಹೇಳಿದನು: “ನರಪುತ್ರನೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ದಹನಬಲಿಗೂ, ರಕ್ತವೆರಚುವ ಸಂಸ್ಕಾರಕ್ಕೂ ಬಲಿಪೀಠವನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಆ ಪುರುಷನು ನನಗೆ ಹೀಗೆ ಹೇಳಿದನು - ನರಪುತ್ರನೇ, ಕರ್ತನಾದ ಯೇಹೋವನು ಇಂತೆನ್ನುತ್ತಾನೆ - ಸರ್ವಾಂಗಹೋಮಕ್ಕೂ ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಕೊಳ್ಳಬೇಕು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಅವನು ನನಗೆ, “ನರಪುತ್ರನೇ, ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಯಜ್ಞವೇದಿಯ ಕ್ರಮಗಳು ಯಾವುದೆಂದರೆ, ಯಜ್ಞವೇದಿಯನ್ನು ಕಟ್ಟುವಾಗ ಸರ್ವಾಂಗಹೋಮ ಮತ್ತು ಅದರ ಮೇಲೆ ರಕ್ತ ಚಿಮುಕಿಸುವದಕ್ಕೆ ಈ ಕ್ರಮಗಳನ್ನು ಅನುಸರಿಸು. ಅಧ್ಯಾಯವನ್ನು ನೋಡಿ |