Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:2 - ಕನ್ನಡ ಸಮಕಾಲಿಕ ಅನುವಾದ

2 ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವಮಾರ್ಗವಾಗಿ ಬಂದಿತು ಮತ್ತು ಅವರ ಧ್ವನಿಯು ಹರಿಯುವ ನೀರಿನ ಘರ್ಜನೆಯಂತಿತ್ತು; ಭೂಮಿಯು ಅವರ ಮಹಿಮೆಯಿಂದ ಪ್ರಕಾಶಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಗೋ, ಇಸ್ರಾಯೇಲಿನ ದೇವರ ತೇಜಸ್ಸು ಮೂಡಣ ಮಾರ್ಗವಾಗಿ ಬಂತು; ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ತೇಜಸ್ಸಿನಿಂದ ಭೂವಿುಯು ಬೆಳಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಲ್ಲಿ ಇಸ್ರೇಲ್ ದೇವರ ಮಹಿಮೆಯು ಪೂರ್ವದಿಂದ ಬಂದಿತು. ದೇವರ ಸ್ವರವು ಸಮುದ್ರದ ಶಬ್ದದಂತೆ ಗಟ್ಟಿಯಾಗಿತ್ತು. ದೇವರ ಮಹಿಮಾ ಪ್ರಕಾಶದಿಂದ ನೆಲವು ಬೆಳಕಿನಿಂದ ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:2
24 ತಿಳಿವುಗಳ ಹೋಲಿಕೆ  

ಇದಾದನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಕೆಳಗೆ ಇಳಿದು ಬರುವುದನ್ನು ಕಂಡೆನು. ಅವನ ತೇಜಸ್ಸಿನಿಂದ ಭೂಮಿಯು ಬೆಳಗಿತು.


ಯೆಹೋವ ದೇವರ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ, ಪಟ್ಟಣದ ಪೂರ್ವದಿಕ್ಕಿನಲ್ಲಿರುವ ಪರ್ವತದ ಮೇಲೆ ನಿಂತಿತು.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.


ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.


ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.


ಅವರ ಪಾದಗಳು ಕುಲುಮೆಯಲ್ಲಿ ಹೊಳೆಯುವ ತಾಮ್ರದಂತೆಯೂ ಅವರ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.


ಆಮೇಲೆ ನಾನು ಎದ್ದು ಬಯಲುಸೀಮೆಯ ಕಡೆಗೆ ಹೋದೆನು. ಯೆಹೋವ ದೇವರ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ನಾನು ಅಡ್ಡ ಬಿದ್ದೆನು.


ಅವು ಚಲಿಸುವಾಗ, ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು. ಅದು ಜಲಪ್ರವಾಹದ ಶಬ್ದದಂತೆಯೂ, ಸರ್ವಶಕ್ತರ ಧ್ವನಿಯ ಹಾಗೆಯೂ, ಸೈನ್ಯದ ಶಬ್ದದ ಹಾಗೆಯೂ ಇತ್ತು. ಅವು ನಿಲ್ಲುವಾಗ ಅವುಗಳ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.


ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


ಇದಲ್ಲದೆ ಪರಲೋಕದಿಂದ ಜಲ ಪ್ರವಾಹದಂತೆಯೂ ಮಹಾ ಗುಡುಗಿನ ಶಬ್ದದಂತೆಯೂ ಇದ್ದ ಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ಕಿನ್ನರಿಗಳನ್ನು ನುಡಿಸುತ್ತಿರುವ ಕಿನ್ನರರ ಶಬ್ದದಂತಿತ್ತು.


ತರುವಾಯ ಜನರ ದೊಡ್ಡ ಗುಂಪಿನ ಶಬ್ದವನ್ನು ಕೇಳಿದೆನು. ಅದು ಹೀಗೆ ಹೇಳಿತು: “ಹಲ್ಲೆಲೂಯಾ! ಸರ್ವಶಕ್ತ ಆಗಿರುವ ನಮ್ಮ ಕರ್ತದೇವರು ಆಳುತ್ತಾರೆ.


ಇವುಗಳಾದ ಮೇಲೆ ಪರಲೋಕದಲ್ಲಿ ದೊಡ್ಡ ಸಮೂಹದ ಮಹಾಸ್ವರವನ್ನು ಕೇಳಿದೆನು. ಅವರು: “ಹಲ್ಲೆಲೂಯಾ! ರಕ್ಷಣೆಯೂ ಮಹಿಮೆಯೂ ಶಕ್ತಿಯೂ ನಮ್ಮ ದೇವರದಾಗಿವೆ!


ಯೆಶಾಯನು ಯೇಸುವಿನ ಮಹಿಮೆಯನ್ನು ಕಂಡಿದ್ದರಿಂದ ಅವರ ವಿಷಯವಾಗಿ ಇವುಗಳನ್ನು ಹೇಳಿದನು.


ದೇವರು, ತೇಮಾನಿನಿಂದಲೂ; ಪರಿಶುದ್ಧರು, ಪಾರಾನ್ ಪರ್ವತದಿಂದಲೂ ಬಂದರು. ಅವರ ಮಹಿಮೆ ಆಕಾಶಗಳನ್ನು ಮುಚ್ಚಿತು. ಅವರ ಸ್ತೋತ್ರವು ಭೂಮಿಯನ್ನು ತುಂಬಿಸಿತು.


ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ, ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು. ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಯೆಹೋವ ದೇವರು ಕೂಗಿ ಅವನಿಗೆ,


ಅದು ದೇವರ ಮಹಿಮೆಯಿಂದ ಕೂಡಿತ್ತು. ಪಟ್ಟಣದ ಪ್ರಕಾಶವು ಸೂರ್ಯಕಾಂತದಂತೆ ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು. ಅದು ಸ್ವಚ್ಛವಾದ ಸ್ಪಟಿಕದಂತೆ ಕಾಣಿಸಿತು.


ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!


ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು. ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.


ಆಗ ಯೆಹೋವ ದೇವರ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿಸಿತು.


ಆಮೇಲೆ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಬಾಗಿಲು ಮುಚ್ಚೇ ಇರಬೇಕು. ಇದು ತೆರೆಯಬಾರದು. ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು. ಏಕೆಂದರೆ ಇಸ್ರಾಯೇಲರ ಯೆಹೋವ ದೇವರು ಇದರಿಂದ ಪ್ರವೇಶಿಸಿದ್ದಾರೆ. ಆದ್ದರಿಂದ ಇದು ಮುಚ್ಚಿರಬೇಕು.


ಅವರ ತೇಜಸ್ಸು ಸೂರ್ಯೋದಯದ ಹಾಗಿತ್ತು. ಕಿರಣಗಳು ಅವರ ಹಸ್ತಗಳಿಂದ ಮಿಂಚಿದವು. ಅದರಲ್ಲಿ ಅವರ ಬಲ ಅಡಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು