ಯೆಹೆಜ್ಕೇಲನು 43:22 - ಕನ್ನಡ ಸಮಕಾಲಿಕ ಅನುವಾದ22 “ಎರಡನೆಯ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ದೋಷಪರಿಹಾರ ಬಲಿಯಾಗಿ ಅರ್ಪಿಸಬೇಕು. ಅವರು ಬಲಿಪೀಠವನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಎರಡನೆಯ ದಿನದಲ್ಲಿ, ಕಳಂಕರಹಿತವಾದ ಹೋತವನ್ನು ದೋಷಪರಿಹಾರಕ ಬಲಿಗಾಗಿ ಅರ್ಪಿಸು; ಹೋರಿಯಿಂದ ಬಲಿಪೀಠವನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷಪರಿಹಾರಕಯಜ್ಞಕ್ಕಾಗಿ ಅರ್ಪಿಸು; ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡತಕ್ಕದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಎರಡನೇ ದಿವಸದಲ್ಲಿ ಪೂರ್ಣಾಂಗವಾದ ಹೋತವನ್ನು ನೀನು ಅರ್ಪಿಸಬೇಕು. ಪಾಪಪರಿಹಾರಕಯಜ್ಞಕ್ಕಾಗಿ ಯಾಜಕರು ಹೇಗೆ ಯಜ್ಞವೇದಿಯನ್ನು ಪವಿತ್ರ ಮಾಡಿದರೋ ಅದೇ ರೀತಿಯಲ್ಲಿ ತಿರುಗಿ ಮಾಡಬೇಕು. ಅಧ್ಯಾಯವನ್ನು ನೋಡಿ |