Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆತಂದಿತು. ಯೆಹೋವ ದೇವರ ಮಹಿಮೆಯಿಂದ ಆಲಯವು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವರಾತ್ಮ ನನ್ನನ್ನು ಎತ್ತಿ ಒಳಗಿನ ಪ್ರಾಕಾರಕ್ಕೆ ತಂದಿತು. ಆಗ ಏನಾಶ್ಚರ್ಯ! ಸರ್ವೇಶ್ವರನ ತೇಜಸ್ಸು ದೇವಸ್ಥಾನವನ್ನು ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರಾತ್ಮವು ನನ್ನನ್ನು ಎತ್ತಿ ಒಳಗಣ ಪ್ರಾಕಾರಕ್ಕೆ ತರಲು ಆಹಾ, ಯೆಹೋವನ ತೇಜಸ್ಸು ದೇವಸ್ಥಾನವನ್ನು ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಪ್ರಾಕಾರಕ್ಕೆ ತಂದಿತು. ಯೆಹೋವನ ಮಹಿಮೆಯು ಆಲಯವನ್ನು ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:5
20 ತಿಳಿವುಗಳ ಹೋಲಿಕೆ  

ಅನಂತರ ದೇವರಾತ್ಮರು, ದೇವರ ಆತ್ಮರಿಂದಾದ ದರ್ಶನದಲ್ಲಿ ನನ್ನನ್ನು ಬಾಬಿಲೋನಿಯರ ದೇಶಕ್ಕೆ ಸೆರೆಯವರ ಬಳಿಗೆ ಎತ್ತಿಕೊಂಡು ಹೋದರು. ಆಗ ನಾನು ನೋಡಿದ ದರ್ಶನವು ನನ್ನಿಂದ ಮೇಲೆ ಹೋಯಿತು.


ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು.


ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು. ನಾನು ನೋಡಿದೆ ಯೆಹೋವ ದೇವರ ಮಹಿಮೆಯು ಯೆಹೋವ ದೇವರ ಆಲಯವನ್ನು ತುಂಬಿಕೊಂಡಿತು, ನಾನು ಬೋರಲು ಬಿದ್ದೆನು.


ಯೆಹೋವ ದೇವರ ಕೈ ನನ್ನ ಮೇಲೆ ಇತ್ತು; ಅದು ಆತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಯಲ್ಲಿ ಇಳಿಸಿತು.


ದೇವರ ದರ್ಶನಗಳಲ್ಲಿ ಅವರು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ನಿಲ್ಲಿಸಿದರು. ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.


ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.


ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಲು ಅವಸರಪಡು! ಅರಸನು ನನ್ನನ್ನು ತನ್ನ ಕೊಠಡಿಯೊಳಗೆ ಕರೆದುಕೊಂಡು ಬರಲಿ. ನಾವು ನಿನ್ನಲ್ಲಿ ಉಲ್ಲಾಸಪಟ್ಟು, ಸಂತೋಷ ಪಡುತ್ತೇವೆ. ದ್ರಾಕ್ಷಾರಸಕ್ಕಿಂತ ಹೆಚ್ಚಾಗಿ ನಿನ್ನ ಪ್ರೀತಿಯನ್ನು ಹೊಗಳುತ್ತೇವೆ. ಅವರು ಯಥಾರ್ಥವಾಗಿ ನಿನ್ನನ್ನು ಮೆಚ್ಚುತ್ತಾರೆ!


ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.


ಇದಲ್ಲದೆ ಅವರು ಅವನಿಗೆ, “ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ. ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಆಗಲಿ. ಒಂದು ವೇಳೆ ಯೆಹೋವ ದೇವರ ಆತ್ಮರು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ, ತಗ್ಗಿನಲ್ಲಾದರೂ ಇಟ್ಟಿರಬಹುದು,” ಎಂದರು. ಅದಕ್ಕೆ ಅವನು, “ಕಳುಹಿಸಬೇಡಿರಿ,” ಎಂದನು.


ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿಕೊಂಡಿತು.


ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.


ಆಮೇಲೆ ದೇವರಾತ್ಮರು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿಗೆ, ನನ್ನನ್ನು ಎತ್ತಿಕೊಂಡು ಹೋದರು. ಪ್ರವೇಶದ್ವಾರದಲ್ಲಿ ಇಪ್ಪತ್ತೈದು ಮಂದಿ ಮನುಷ್ಯರು ಇದ್ದರು. ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗ ಯಾಜನ್ಯನನ್ನೂ, ಬೆನಾಯನ ಮಗ ಪೆಲಟೀಯನನ್ನೂ ನೋಡಿದೆನು.


ನಿನ್ನನ್ನು ಅಸ್ಪಷ್ಟ ಭಾಷೆಯ ಮತ್ತು ಅನ್ಯಭಾಷೆಯ ಜನರ ಬಳಿಗೆ ಕಳುಹಿಸದೆ, ಇಸ್ರಾಯೇಲಿನ ಜನರ ಬಳಿಗೆ ಕಳುಹಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು