ಯೆಹೆಜ್ಕೇಲನು 43:8 - ಕನ್ನಡ ಸಮಕಾಲಿಕ ಅನುವಾದ8 ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ. ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿಬಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನ ಹೊಸ್ತಲನಿಲವುಗಳ ಪಕ್ಕದಲ್ಲಿ ತಮ್ಮ ಹೊಸ್ತಲುನಿಲವುಗಳನ್ನು ಹಾಕಿಕೊಂಡು, ನನ್ನ ಮನೆಗೂ ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ನನ್ನ ಪವಿತ್ರನಾಮವನ್ನು ಅಶುದ್ಧಗೊಳಿಸರು. ಹೌದು, ಹಿಂದೆ ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರನಾಮವನ್ನು ಹೊಲೆಗೆಡಿಸಿದರು; ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ಹೊಸ್ತಲುನಿಲವುಗಳ ಪಕ್ಕದಲ್ಲಿ ತಮ್ಮ ಹೊಸ್ತಲುನಿಲವುಗಳನ್ನು ಹಾಕಿಕೊಂಡು ನನ್ನ ಮನೆಗೂ ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವದರಿಂದಲೂ ಇನ್ನು ನನ್ನ ಪವಿತ್ರನಾಮವನ್ನು ಹೊಲೆಗೆಡಿಸರು; ಆಹಾ, ತಾವು ನಡಿಸಿದ ದುರಾಚಾರಗಳಿಂದ ನನ್ನ ಪವಿತ್ರನಾಮವನ್ನು ಹೊಲಗೆಡಿಸಿದರು; ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರ ಹೊಸ್ತಿಲನ್ನು ನನ್ನ ಹೊಸ್ತಿಲ ಬಳಿಯಲ್ಲಿ ಇಡುವದರಿಂದ ಅವರ ನಿಲುವುಗಳನ್ನು ನನ್ನ ನಿಲುವುಗಳ ಬಳಿಯಲ್ಲಿ ಇಡುವದರಿಂದ ಅವರು ನನ್ನ ಹೆಸರಿಗೆ ಅವಮಾನ ಮಾಡುವದಿಲ್ಲ. ಹಿಂದಿನ ಕಾಲದಲ್ಲಿ, ಕೇವಲ ಒಂದೇ ಗೋಡೆಯು ಅವರಿಂದ ನನ್ನನ್ನು ಪ್ರತ್ಯೇಕಿಸಿತ್ತು. ಆದ್ದರಿಂದ ಪ್ರತಿಯೊಂದು ಸಲ ಅವರು ಪಾಪ ಮಾಡಿದಾಗ ಮತ್ತು ಆ ಭಯಂಕರ ಕೃತ್ಯಗಳನ್ನು ಮಾಡಿದಾಗ ನನ್ನ ಹೆಸರಿಗೆ ಅವಮಾನವಾಯಿತು. ಆದ್ದರಿಂದ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು. ಅಧ್ಯಾಯವನ್ನು ನೋಡಿ |