Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:11 - ಕನ್ನಡ ಸಮಕಾಲಿಕ ಅನುವಾದ

11 ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿಸುವವರಾಗಿರುವರು. ಆಲಯದ ಬಾಗಿಲುಗಳ ಮೇಲ್ವಿಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು. ಅವರು ಜನರಿಗೋಸ್ಕರ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡಿ ಅವರಿಗೆ ಸೇವೆ ಮಾಡುವ ಹಾಗೆ ಅವರ ಮುಂದೆ ನಿಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪರವಾಗಿ ದಹನ ಬಲಿಪಶುವನ್ನೂ ಶಾಂತಿಸಮಾಧಾನ ಬಲಿಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ [ಸಮಾಧಾನ] ಯಜ್ಞಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಪವಿತ್ರಸ್ಥಳದಲ್ಲಿ ಸೇವೆಮಾಡಲು ಲೇವಿಯರು ಆರಿಸಲ್ಪಟ್ಟಿರುತ್ತಾರೆ. ಅವರು ಆಲಯದ ಪ್ರವೇಶ ದ್ವಾರವನ್ನು ಕಾವಲು ಕಾಯ್ದರು. ಆಲಯದೊಳಗೆ ಸೇವೆಮಾಡಿದರು. ಜನರು ಅರ್ಪಿಸುವ ಪ್ರಾಣಿಗಳನ್ನು ವಧಿಸಿ ಯಜ್ಞಕ್ಕಾಗಿ ಅವುಗಳನ್ನು ತಯಾರುಮಾಡಿ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದರು. ಜನರಿಗೆ ಸಹಾಯ ಮಾಡಿ, ಅವರ ಸೇವೆಮಾಡಲು ಅವರು ಆರಿಸಲ್ಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:11
13 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಗುಡಾರದ ಸೇವೆಯನ್ನು ಮಾಡುವುದಕ್ಕೂ, ಸಮೂಹದ ಮುಂದೆ ಇರುವ ಅವರ ಸೇವೆಯಲ್ಲಿ ನಿಲ್ಲುವುದಕ್ಕೂ ಇಸ್ರಾಯೇಲರ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲರೊಳಗಿಂದಲೇ ನಿಮ್ಮನ್ನು ಪ್ರತ್ಯೇಕಿಸಿದ್ದು, ನಿಮಗೆ ಅಲ್ಪವಾಗಿ ತೋರಿತೋ?


ಆದರೆ ಯಾಜಕರು ಸ್ವಲ್ಪ ಜನರಾಗಿದ್ದು, ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದುದರಿಂದ, ಕೆಲಸವು ತೀರುವವರೆಗೂ, ಮಿಕ್ಕ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವವರೆಗೂ ಲೇವಿಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಏಕೆಂದರೆ ಯಾಜಕರಿಗಿಂತ ತಮ್ಮನ್ನು ಪರಿಶುದ್ಧ ಮಾಡಿಕೊಳ್ಳುವುದರಲ್ಲಿ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.


ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆಗೋಸ್ಕರವೂ ಅದರಲ್ಲಿ ಮಾಡುವಂತಹ ಎಲ್ಲವುಗಳಿಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿಕೊಳ್ಳುವವರನ್ನಾಗಿ ಮಾಡುವೆನು.


ಅವನು ನನಗೆ ಹೇಳಿದ್ದೇನೆಂದರೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ದೇವಾಲಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.


ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು.


ನಾನು ನಿಮ್ಮ ಸಹೋದರರಾದ ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡಿದ್ದೇನೆ. ದೇವದರ್ಶನ ಗುಡಾರದ ಸೇವೆಯನ್ನು ಮಾಡುವುದಕ್ಕೆ ಅವರು ಯೆಹೋವ ದೇವರಿಗಾಗಿ ನಿಮಗೆ ಕಾಣಿಕೆಯಾಗಿ ಸಮರ್ಪಿತರಾಗಿದ್ದಾರೆ.


ಯೆಹೋವ ದೇವರು ಮೋಶೆಯ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ನಿನ್ನ ಗೋತ್ರದ ಮೂಲಪುರುಷನಾದ ಲೇವಿ ವಂಶದವರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಏಕೆಂದರೆ ಅವರು ನಿನ್ನ ಕೂಡ ಇದ್ದು, ನಿನಗೆ ಸೇವೆಮಾಡಬೇಕು. ಆದರೆ ನೀನು ಮತ್ತು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷಿ ಗುಡಾರದ ಮುಂದೆ ಸೇವೆಮಾಡಬೇಕು.


ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು.


ಆಮೇಲೆ ಅವನು ನನಗೆ, “ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂಥ ಸ್ಥಳಗಳು ಎಂದು ಹೇಳಿದನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು