ಯೆಹೆಜ್ಕೇಲನು 44:2 - ಕನ್ನಡ ಸಮಕಾಲಿಕ ಅನುವಾದ2 ಆಮೇಲೆ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಬಾಗಿಲು ಮುಚ್ಚೇ ಇರಬೇಕು. ಇದು ತೆರೆಯಬಾರದು. ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು. ಏಕೆಂದರೆ ಇಸ್ರಾಯೇಲರ ಯೆಹೋವ ದೇವರು ಇದರಿಂದ ಪ್ರವೇಶಿಸಿದ್ದಾರೆ. ಆದ್ದರಿಂದ ಇದು ಮುಚ್ಚಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಯೆಹೋವನು ನನಗೆ, “ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದನ್ನು ತೆರೆಯಬಾರದು, ಇದರಿಂದ ಯಾರೂ ಪ್ರವೇಶಿಸಬಾರದು. ಇಸ್ರಾಯೇಲಿನ ದೇವರಾದ ಯೆಹೋವನು ಇದರಿಂದ ಪ್ರವೇಶಿಸಿದ್ದಾನೆ. ಆದುದರಿಂದ ಇದು ಮುಚ್ಚಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಸರ್ವೇಶ್ವರ ನನಗೆ, “ಈ ಬಾಗಿಲು ಮುಚ್ಚಿರಬೇಕು, ಇದನ್ನು ತೆರೆಯಕೂಡದು. ಇದರಿಂದ ಯಾರೂ ಪ್ರವೇಶಿಸದಿರಲಿ; ಇಸ್ರಯೇಲಿನ ದೇವರಾದ ಸರ್ವೇಶ್ವರ ಇದರಿಂದ ಪ್ರವೇಶಿಸಿದ್ದಾರೆ; ಇದು ಮುಚ್ಚೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಯೆಹೋವನು ನನಗೆ - ಈ ಬಾಗಿಲು ಮುಚ್ಚಿರಬೇಕು, ಇದನ್ನು ತೆರೆಯಕೂಡದು. ಇದರಿಂದ ಯಾರೂ ಪ್ರವೇಶಿಸದಿರಲಿ; ಇಸ್ರಾಯೇಲಿನ ದೇವರಾದ ಯೆಹೋವನು ಇದರಿಂದ ಪ್ರವೇಶಿಸಿದ್ದಾನಲ್ಲಾ; ಇದು ಮುಚ್ಚೇ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಯೆಹೋವನು ನನಗೆ ಹೀಗೆಂದನು, “ಈ ದ್ವಾರವು ಮುಚ್ಚಿಯೇ ಇರಬೇಕು. ಇದು ತೆರೆಯಲ್ಪಡುವದಿಲ್ಲ. ಇದರ ಮೂಲಕ ಯಾರೂ ಪ್ರವೇಶ ಮಾಡುವದಿಲ್ಲ. ಯಾಕೆಂದರೆ ಇಸ್ರೇಲಿನ ದೇವರಾದ ಯೆಹೋವನು ಈ ದ್ವಾರದ ಮೂಲಕ ಪ್ರವೇಶಿಸಿದ್ದನು. ಆದ್ದರಿಂದ ಇದು ಮುಚ್ಚಿಯೇ ಇರಬೇಕು. ಅಧ್ಯಾಯವನ್ನು ನೋಡಿ |