Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:29 - ಕನ್ನಡ ಸಮಕಾಲಿಕ ಅನುವಾದ

29 ಧಾನ್ಯ ಸಮರ್ಪಣೆಯನ್ನು ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅವರು ತಿನ್ನಬೇಕು. ಇಸ್ರಾಯೇಲಿನಲ್ಲಿ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕ ಯಜ್ಞದ್ರವ್ಯವನ್ನೂ, ಪ್ರಾಯಶ್ಚಿತ್ತ ಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವರು ಧಾನ್ಯ ನೈವೇದ್ಯವನ್ನೂ ದೋಷಪರಿಹಾರಕ ಬಲಿದ್ರವ್ಯವನ್ನೂ ಪ್ರಾಯಶ್ಚಿತ್ತ ಬಲಿದ್ರವ್ಯವನ್ನೂ ಅನುಭವಿಸಲಿ. ಸರ್ವೇಶ್ವರನದಾಗಿಯೇ ಇರಲೆಂದು ಇಸ್ರಯೇಲರು ಹರಕೆಮಾಡಿಕೊಡುವುದೆಲ್ಲವೂ ಅವರಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕಯಜ್ಞದ್ರವ್ಯವನ್ನೂ ಪ್ರಾಯಶ್ಚಿತ್ತಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲ್ಯರು ಹರಕೆಮಾಡಿಕೊಡುವದೆಲ್ಲವೂ ಅವರಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಜನರು ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞಕ್ಕೆ ತಂದ ಕಾಣಿಕೆಯೇ ಅವರ ಆಹಾರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:29
14 ತಿಳಿವುಗಳ ಹೋಲಿಕೆ  

“ಇಸ್ರಾಯೇಲರು ಯೆಹೋವ ದೇವರಿಗೆ ಹರಕೆಮಾಡಿ ಸಮರ್ಪಿಸಿದ ಪ್ರತಿಯೊಂದೂ ನಿನ್ನದಾಗಿದೆ.


ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು.


“ ‘ಯಾರಾದರೂ ಮನುಷ್ಯನನ್ನಾಗಲಿ, ಪಶುವನ್ನಾಗಲಿ, ಪಿತ್ರಾರ್ಜಿತ ಹೊಲವನ್ನಾಗಲಿ ತನಗಿದ್ದ ಬೇರೆ ಯಾವುದನ್ನಾಗಲಿ ಒಬ್ಬ ಮನುಷ್ಯನು ಯೆಹೋವ ದೇವರಿಗಾಗಿ ಮೀಸಲಾಗಿಟ್ಟಿದ್ದರೆ, ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು. ಮೀಸಲಾಗಿರುವ ಪ್ರತಿಯೊಂದೂ ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.


ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.


ಯಾಜಕರ ಕುಟುಂಬದಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.


ಪಾಪ ಪರಿಹಾರದ ಬಲಿಯನ್ನು ಮಾಡುವ ಯಾಜಕನು ಅದನ್ನು ತಿನ್ನಬೇಕು. ಅದನ್ನು ಸಭೆಯ ದೇವದರ್ಶನದ ಗುಡಾರದ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.


ನಮಗೊಂದು ಬಲಿಪೀಠ ಉಂಟು. ಅದರ ಪದಾರ್ಥವನ್ನು ತಿನ್ನುವುದಕ್ಕೆ ಗುಡಾರದ ಸೇವೆ ಮಾಡುವವರಿಗೆ ಹಕ್ಕಿಲ್ಲ.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಅವನು ಅವರಿಗೆ ಹೇಳಿದ ಪ್ರಕಾರ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದ್ದರಿಂದ, ಇಸ್ರಾಯೇಲಿನ ದೇವರೇ ಅವರ ಸೊತ್ತು.


ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು