ಯೆಹೆಜ್ಕೇಲನು 44:3 - ಕನ್ನಡ ಸಮಕಾಲಿಕ ಅನುವಾದ3 ಇದು ಪ್ರಭುವಿಗಾಗಿ ಇದೆ; ಪ್ರಭುವು ಅವರೊಳಗೆ ಕುಳಿತುಕೊಂಡು, ಯೆಹೋವ ದೇವರ ಮುಂದೆ ರೊಟ್ಟಿಯನ್ನು ತಿನ್ನಬೇಕು. ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ರಾಜರು ಸರ್ವೇಶ್ವರನ ಸನ್ನಿಧಿಯಲ್ಲಿ ಹವಿರ್ಭೋಜನ ಮಾಡುವುದಕ್ಕೆ ಇಲ್ಲಿ ಕುಳಿತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಹವಿರ್ಭೋಜನಮಾಡುವದಕ್ಕೆ ಇಲ್ಲಿ ಪ್ರಭುವಾಗಿ ಕೂತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಸೇರಿ ಅದೇ ಮಾರ್ಗವಾಗಿ ಹೊರಡಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಜನರ ಅಧಿಪತಿಯು ಯೆಹೋವನ ಸನ್ನಿಧಿಯಲ್ಲಿ ಊಟಮಾಡಲು ಬರುವಾಗ ಅವನು ಮಾತ್ರ ಈ ದ್ವಾರದ ಬಳಿ ಕುಳಿತುಕೊಳ್ಳಬಹುದು. ಅಧಿಪತಿಯು ದ್ವಾರದ ಮಂಟಪದ ಮೂಲಕ ಪ್ರವೇಶಿಸಬೇಕು ಮತ್ತು ಅದೇ ಮಾರ್ಗದಲ್ಲಿ ಹೊರ ಬರಬೇಕು.” ಅಧ್ಯಾಯವನ್ನು ನೋಡಿ |
ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.