Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:5 - ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಯೆಹೋವ ದೇವರ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನಿಯಮದ ವಿಷಯವಾಗಿಯೂ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ. ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧಸ್ಥಳದ ಪ್ರತಿಯೊಂದು ಹಾದುಹೋಗುಗಳನ್ನೂ ಗಮನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಯೆಹೋವನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ ಮತ್ತು ಪವಿತ್ರಾಲಯದ ಪ್ರವೇಶವನ್ನೂ, ಪರಿಶುದ್ಧ ಸ್ಥಳದ ಪ್ರತಿಯೊಂದು ಹಾಗುಹೋಗುಗಳನ್ನೂ ಗಮನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಸರ್ವೇಶ್ವರನ ಆಲಯದ ಸಕಲ ನಿಯಮ ನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನದಟ್ಟು ಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನವಿಧಿಗಳನ್ನು ಗಮನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೋವನು ನನಗೆ ಹೀಗೆ ಹೇಳಿದನು - ನರಪುತ್ರನೇ, ಯೆಹೋವನ ಆಲಯದ ಸಕಲ ನಿಯಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವದನ್ನೆಲ್ಲಾ ನೀನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮಂದಟ್ಟುಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನ ವಿಧಿಗಳನ್ನು ಗಮನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಕಿವಿಯಾರೆ ಕೇಳು, ಕಣ್ಣಾರೆ ನೋಡಿ ಅರ್ಥಮಾಡಿಕೊ. ಪವಿತ್ರಾಲಯದ ಎಲ್ಲಾ ವಿಧಿನಿಯಮಗಳನ್ನು ಗಮನವಿಟ್ಟು ಕೇಳು. ಆಲಯದೊಳಕ್ಕೆ ಬರುವ ಪ್ರವೇಶ ದ್ವಾರಗಳನ್ನೂ ಪವಿತ್ರಸ್ಥಳದಿಂದ ಹೊರ ಹೋಗುವ ಪ್ರವೇಶ ದ್ವಾರಗಳನ್ನೂ ಗಮನವಿಟ್ಟು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:5
17 ತಿಳಿವುಗಳ ಹೋಲಿಕೆ  

ಆ ಮನುಷ್ಯನು ನನಗೆ, “ಮನುಷ್ಯಪುತ್ರನೇ ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ಮತ್ತು ನಾನು ತೋರಿಸುವ ಎಲ್ಲಾ ಸಂಗತಿಗಳಿಗೆ ನೀನು ಮನಸ್ಸಿಡು. ನಾನು ನಿನಗೆ ಅವುಗಳನ್ನೆಲ್ಲಾ ತೋರಿಸುವುದಕ್ಕಾಗಿಯೇ ಇಲ್ಲಿಗೆ ನಿನ್ನನ್ನು ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ಜನರಿಗೆ ತಿಳಿಸು,” ಎಂದರು.


“ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.


ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಆಗ ಅವನು ನನಗೆ, “ದಾನಿಯೇಲನೇ, ನೀನು ಭಯಪಡಬೇಡ. ಏಕೆಂದರೆ ನೀನು ತಿಳಿದುಕೊಳ್ಳುವುದಕ್ಕೂ, ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಪ್ರಾರ್ಥನೆಯು ದೇವರಿಗೆ ಮುಟ್ಟಿತು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ.


ಆಗ ನಾನು ಅದನ್ನು ನೋಡಿ ಚಿಂತಿಸತೊಡಗಿದೆ; ನಾನು ಕಂಡದ್ದರಿಂದ ಪಾಠ ಕಲಿತೆನು.


ದೇವರೇ, ನಿಮ್ಮ ಸೂತ್ರಗಳನ್ನು ಪೂರ್ಣವಾಗಿ ಕೈಗೊಳ್ಳಬೇಕೆಂದು ನೀವು ಆಜ್ಞಾಪಿಸಿದ್ದೀರಿ.


ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕುವ ಮನಸ್ಸು ಮಾಡಿದ ಇಸ್ರಾಯೇಲಿನ ಪ್ರತಿಯೊಂದು ಕುಲಗಳಿಂದ ಕೆಲವರು ತಮ್ಮ ಪೂರ್ವಜರ ದೇವರಾದ ಯೆಹೋವ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.


ನಿಮ್ಮ ದೇವರಾದ ಯೆಹೋವ ದೇವರನ್ನು ಹುಡುಕಲು ನಿಮ್ಮ ಹೃದಯವನ್ನೂ, ನಿಮ್ಮ ಪ್ರಾಣವನ್ನೂ ಒಪ್ಪಿಸಿ, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ದೇವರ ಪರಿಶುದ್ಧ ಪಾತ್ರೆಗಳನ್ನು ಯೆಹೋವ ದೇವರ ನಾಮಕ್ಕಾಗಿ ಕಟ್ಟಲಾಗುವ ಆಲಯದೊಳಗೆ ತರುವ ಹಾಗೆ, ಎದ್ದು ಯೆಹೋವ ದೇವರಾದ ದೇವರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ,” ಎಂದನು.


ಆದರೆ ಯೆಹೋವ ದೇವರ ವಾಕ್ಯಕ್ಕೆ ಮನಸ್ಸು ಕೊಡದವರು, ತಮ್ಮ ದಾಸರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.


ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶವಿತ್ತು.


ಆಮೇಲೆ ಅವನು ನನ್ನನ್ನು ಬಾಗಿಲಿನ ಪಕ್ಕದಲ್ಲಿದ್ದ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಅವುಗಳ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.


ಅವರು ನನಗೆ, “ಮನುಷ್ಯಪುತ್ರನೇ, ನೀನು ಇದನ್ನು ನೋಡಿದೆಯಾ?” ಆಗ ಅವನು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು.


ಯೆಹೋವ ದೇವರ ಪರ್ವತವನ್ನು ಹತ್ತುವವನು ಯಾರು? ಅವರ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು