Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:6 - ಕನ್ನಡ ಸಮಕಾಲಿಕ ಅನುವಾದ

6 “ ‘ನೀವು ಪಟ್ಟಣದ ಸೊತ್ತನ್ನು ಕಾಣಿಕೆಯಾದ ಪರಿಶುದ್ಧಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು. ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ನನಗೆ ಸಮರ್ಪಿಸುವ ಪರಿಶುದ್ಧ ಭಾಗದ ಪಕ್ಕದಲ್ಲಿ ಐದು ಸಾವಿರ ಮೊಳ ಅಗಲದ, ಇಪ್ಪತ್ತೈದು ಸಾವಿರ ಮೊಳ ಉದ್ದದ ಕ್ಷೇತ್ರವನ್ನು ಪಟ್ಟಣಕ್ಕೆ ಒಳಪಟ್ಟ ಭೂಮಿಯನ್ನಾಗಿ ನೇಮಿಸಬೇಕು. ಅದರಲ್ಲಿ ಇಸ್ರಾಯೇಲ್ ವಂಶದವರಿಗೆಲ್ಲಾ ಹಕ್ಕಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಸಮರ್ಪಿಸುವ ಪರಿಶುದ್ಧಭಾಗದ ಅಕ್ಕಪಕ್ಕದಲ್ಲಿ ಎರಡುವರೆ ಕಿಲೋಮೀಟರ್ ಅಗಲದ, ಹನ್ನೆರಡುವರೆ ಕಿಲೋಮೀಟರ್ ಉದ್ದದ ಕ್ಷೇತ್ರವನ್ನು ರಾಜಧಾನಿಗೆ ಒಳಪಟ್ಟ ಭೂಮಿಯನ್ನಾಗಿ ನೇಮಿಸಬೇಕು; ಅದರಲ್ಲಿ ಇಸ್ರಯೇಲ್ ವಂಶದವರಿಗೆಲ್ಲಾ ಹಕ್ಕಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ನನಗೆ ಸಮರ್ಪಿಸುವ ಪರಿಶುದ್ಧ ಭಾಗದ ಪಕ್ಕಪಕ್ಕದಲ್ಲಿ ಐದು ಸಾವಿರ ಮೊಳ ಅಗಲದ ಇಪ್ಪತ್ತೈದು ಸಾವಿರ ಮೊಳ ಉದ್ದದ ಕ್ಷೇತ್ರವನ್ನು ರಾಜಧಾನಿಗೆ ಒಳಪಟ್ಟ ಭೂವಿುಯನ್ನಾಗಿ ನೇವಿುಸಬೇಕು; ಅದರಲ್ಲಿ ಇಸ್ರಾಯೇಲ್ ವಂಶದವರಿಗೆಲ್ಲಾ ಹಕ್ಕಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಪವಿತ್ರ ಪ್ರದೇಶ ಭಾಗದ ಪಕ್ಕದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಐದು ಸಾವಿರ ಮೊಳ ಅಗಲದ ಪ್ರದೇಶ ಭಾಗವು ಸಹ ಇರುತ್ತದೆ. ಇಸ್ರೇಲಿನ ಉಳಿದೆಲ್ಲ ಜನರಿಗೂ ಈ ಪ್ರದೇಶ ಭಾಗವು ಪಟ್ಟಣವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:6
3 ತಿಳಿವುಗಳ ಹೋಲಿಕೆ  

“ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು