Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:9 - ಕನ್ನಡ ಸಮಕಾಲಿಕ ಅನುವಾದ

9 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ, ನೀತಿನ್ಯಾಯಗಳನ್ನು ನಡೆಸಿರಿ. ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ. ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡಿಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ; ಇದು ಕರ್ತನಾದ ಯೆಹೋವನ ನುಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇದು ನನ್ನ ಒಡೆಯನಾದ ಯೆಹೋವನ ನುಡಿಗಳು: “ಇಸ್ರೇಲ್ ಜನರನ್ನು ಆಳುವವರೇ, ಅವರನ್ನು ಕಠಿಣವಾಗಿ ಆಳುವದನ್ನು ನಿಲ್ಲಿಸಿರಿ. ಅವರನ್ನು ಸುಲುಕೊಳ್ಳುವದನ್ನು ನಿಲ್ಲಿಸಿರಿ. ನ್ಯಾಯದಿಂದಿದ್ದು ಒಳ್ಳೆಯದನ್ನೆ ಮಾಡಿರಿ. ಅವರನ್ನು ಅವರ ಮನೆಗಳಿಂದ ಹೊರಡಿಸುವದನ್ನು ನಿಲ್ಲಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:9
23 ತಿಳಿವುಗಳ ಹೋಲಿಕೆ  

ನೀವು ಮಾಡತಕ್ಕ ಕಾರ್ಯಗಳು ಇವೇ: ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಮಾತನಾಡಲಿ. ನಿಮ್ಮ ನ್ಯಾಯಾಲಯಗಳಲ್ಲಿ ಸತ್ಯವೂ ನ್ಯಾಯವೂ ಶಾಂತಿಯ ಸಾಧನವಾಗಿರಲಿ.


ತಿರುಗಿಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ.


ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.


ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ.


ಅದರಂತೆಯೇ ಸೈನಿಕರು, “ನಾವೇನು ಮಾಡಬೇಕು?” ಎಂದು ಕೇಳಿದರು. ಅದಕ್ಕೆ ಯೋಹಾನನು, “ಯಾರನ್ನೂ ಬೆದರಿಸಿ ಹಣ ತೆಗೆದುಕೊಳ್ಳಬೇಡಿರಿ. ಯಾರ ಮೇಲೆಯೂ ಸುಳ್ಳು ದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ,” ಎಂದು ಹೇಳಿದನು.


ನನ್ನ ಜನರ ಸ್ತ್ರೀಯರನ್ನು ಅವರ ರಮ್ಯವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ. ಅವರ ಮಕ್ಕಳಿಂದ ನನ್ನ ಆಶೀರ್ವಾದವನ್ನು ಎಂದೆಂದಿಗೂ ತೆಗೆದಿದ್ದೀರಿ.


ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ; ದಿಕ್ಕಿಲ್ಲದವರ ತೋಳುಗಳನ್ನು ಮುರಿದುಬಿಟ್ಟೆ.


ಏಕೆಂದರೆ ಅವನು ಬಡವರನ್ನು ಜಜ್ಜಿ ಅವರನ್ನು ನಿರ್ಗತಿಕರನ್ನಾಗಿ ಮಾಡಿದನು; ತಾನು ನಿರ್ಮಿಸದ ಮನೆಗಳನ್ನು ವಶಪಡಿಸಿಕೊಂಡಿದ್ದಾನೆ.


ಬುಗ್ಗೆಯು ನೀರನ್ನು ಹರಿಯ ಮಾಡುವಂತೆ, ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ. ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳ ಬರುತ್ತದೆ. ದುಃಖವೂ ಗಾಯಗಳೂ ಯಾವಾಗಲೂ ನನ್ನ ಮುಂದೆ ಇವೆ.


ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು. ಅವರಲ್ಲಿಯೂ ಅವರ ಜನಸಮೂಹದಲ್ಲಿಯೂ, ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಮೌಲ್ಯವು ಇರುವುದಿಲ್ಲ.


“ ‘ಸರಪಳಿಯನ್ನು ತಯಾರುಮಾಡು. ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.


ಆಗ ಅವರು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದ ಮನೆತನದವರಿಗಲ್ಲವೇ? ಏಕೆಂದರೆ ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರಲ್ಲವೇ? ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟುಕೊಳ್ಳುತ್ತಾರೆ.


ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.


ದುಷ್ಟಮನೆತನವೇ ನೀನು ಕೆಟ್ಟದ್ದಾಗಿ ಸಂಪಾದಿಸಿದ್ದನ್ನು ಶಾಪಗ್ರಸ್ತರಾದ ಕಡಿಮೆ ಅಳತೆಯನ್ನು ನಾನು ಮರೆಯಬೇಕೋ?


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು