Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:1 - ಕನ್ನಡ ಸಮಕಾಲಿಕ ಅನುವಾದ

1 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಒಳಗಿನ ಅಂಗಳದ ಪೂರ್ವದಿಕ್ಕಿನ ಎದುರಾಗಿರುವ ಬಾಗಿಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲಾಗಬೇಕು. ಆದರೆ ಸಬ್ಬತ್ ದಿನದಲ್ಲಿ ಅದು ತೆರೆದಿರಬೇಕು. ಅಮಾವಾಸ್ಯೆಯ ದಿನದಲ್ಲೂ ಅದು ತೆರೆದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ವಾರದೊಳಗೆ ಕೆಲಸ ನಡೆಯುವ ಆರು ದಿವಸಗಳಲ್ಲಿ ಒಳಗಿನ ಪ್ರಾಕಾರದ ಪೂರ್ವ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲೂ ಅಮಾವಾಸ್ಯೆಯಲ್ಲೂ ತೆರೆದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವಾರದೊಳಗೆ ಕೆಲಸನಡೆಯುವ ಆರು ದಿವಸಗಳಲ್ಲಿ ಒಳಗಣ ಪ್ರಾಕಾರದ ಮೂಡಲ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಳಗಿನ ಪ್ರಾಕಾರದ ಪೂರ್ವ ದಿಕ್ಕಿನ ದ್ವಾರವು ಆರು ಕೆಲಸದ ದಿವಸಗಳಲ್ಲಿ ಮುಚ್ಚಲ್ಪಡುವದು. ಅದು ಸಬ್ಬತ್ ದಿವಸಗಳಲ್ಲಿಯೂ ಅಮಾವಾಸ್ಯೆಯ ದಿವಸಗಳಲ್ಲಿಯೂ ತೆರೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:1
15 ತಿಳಿವುಗಳ ಹೋಲಿಕೆ  

ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.


ಆರು ದಿನಗಳಲ್ಲಿ ನೀನು ದುಡಿದು, ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.


ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, “ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ,” ಎಂದನು.


ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗವಾದ ಒಂದು ಎಳೆಯ ಹೋರಿ, ಆರು ಕುರಿಮರಿಗಳು, ಒಂದು ಟಗರನ್ನು ಅರ್ಪಿಸಬೇಕು. ಇವು ದೋಷವಿಲ್ಲದ್ದಾಗಿರಬೇಕು.


ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ಇವರು ಈವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲಲ್ಲಿ ಕಾದುಕೊಂಡಿದ್ದರು. ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.


ಆ ಮನುಷ್ಯನು ಒಳಗೆ ಹೋದಾಗ ಕೆರೂಬಿಗಳು ಆಲಯದ ದಕ್ಷಿಣ ಭಾಗದ ಬಳಿಯಲ್ಲಿ ನಿಂತಿದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿಕೊಂಡಿತ್ತು.


ಆಗ ಅವನು ಕೆಳಗಿನ ಬಾಗಿಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು.


ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಿಲಿಗೆ ಕರೆದುಕೊಂಡು ಹೋದನು.


ದೇಶದ ಜನರು ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಈ ಬಾಗಿಲಿನ ಕದದ ಹತ್ತಿರ ಯೆಹೋವ ದೇವರ ಮುಂದೆ ಇದೇ ರೀತಿ ಆರಾಧಿಸಬೇಕು.


“ ‘ರಾಜಕುಮಾರನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಯೆಹೋವ ದೇವರಿಗೆ ಸಮರ್ಪಿಸುವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಿಲನ್ನು ಅವನಿಗೆ ತೆರೆಯಬೇಕು. ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಹಾಗೆ ಸಮರ್ಪಣೆಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಿಲನ್ನು ಮುಚ್ಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು