ಯೆಹೆಜ್ಕೇಲನು 46:12 - ಕನ್ನಡ ಸಮಕಾಲಿಕ ಅನುವಾದ12 “ ‘ರಾಜಕುಮಾರನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಯೆಹೋವ ದೇವರಿಗೆ ಸಮರ್ಪಿಸುವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಿಲನ್ನು ಅವನಿಗೆ ತೆರೆಯಬೇಕು. ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಹಾಗೆ ಸಮರ್ಪಣೆಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಿಲನ್ನು ಮುಚ್ಚಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ರಾಜರು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ದಹನಬಲಿಯನ್ನಾಗಲಿ, ಶಾಂತಿಸಮಾಧಾನಬಲಿಗಳನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕೆಂದಿರುವಾಗ ಅವನಿಗಾಗಿ ಪೂರ್ವಹೆಬ್ಬಾಗಿಲನ್ನು ತೆರೆಯಬೇಕು; ಅವನು ಸಬ್ಬತ್‍ದಿನದಲ್ಲಿ ಸಮರ್ಪಿಸುವಂತೆ ದಹನಬಲಿಪ್ರಾಣಿಯನ್ನೂ ಶಾಂತಿಸಮಾಧಾನ ಬಲಿಪ್ರಾಣಿಗಳನ್ನೂ ಸಮರ್ಪಿಸಿ ಹೊರಡಲಿ; ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಪ್ರಭುವು ಸ್ವಂತ ಇಚ್ಫೆಯಿಂದ ಕಾಣಿಕೆಯನ್ನಾಗಲಿ ಸರ್ವಾಂಗಹೋಮವನ್ನಾಗಲಿ ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕೆಂದಿರುವಾಗ ಅವನಿಗಾಗಿ ಮೂಡಲ ಹೆಬ್ಬಾಗಿಲನ್ನು ತೆರೆಯಬೇಕು; ಅವನು ಸಬ್ಬತ್‍ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮಪಶುವನ್ನೂ ಸಮಾಧಾನಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ; ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ರಾಜನು ತನ್ನ ಇಚ್ಛೆಯ ಪ್ರಕಾರ ಯೆಹೋವನಿಗೆ ಸರ್ವಾಂಗಹೋಮ ಅಥವಾ ಸಮಾಧಾನಯಜ್ಞ ಅಥವಾ ಮನಃಪೂರ್ವಕವಾದ ಕಾಣಿಕೆಯನ್ನು ಸಮರ್ಪಿಸುವಾಗ ಅವನಿಗಾಗಿ ಪೂರ್ವದ ಬಾಗಿಲು ತೆಗೆಯಲ್ಪಡಬೇಕು. ಆದರೆ ಅವನು ಸಬ್ಬತ್ ದಿನದಂತೆ ತನ್ನ ಕಾಣಿಕೆಗಳನ್ನು ಸಮರ್ಪಿಸಿದ ನಂತರ ಅವನು ಹಿಂತಿರುಗಿದಾಗ ಪ್ರವೇಶ ದ್ವಾರವು ಮುಚ್ಚಲ್ಪಡಬೇಕು. ಅಧ್ಯಾಯವನ್ನು ನೋಡಿ |