ಯೆಹೆಜ್ಕೇಲನು 46:18 - ಕನ್ನಡ ಸಮಕಾಲಿಕ ಅನುವಾದ18 ಇದಾದ ಮೇಲೆ ರಾಜಕುಮಾರನು ಜನರ ಸೊತ್ತನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆಯೊಳಗಿಂದ ಅವರನ್ನು ತಳ್ಳಬಾರದು. ನನ್ನ ಜನರು ತಮ್ಮ ತಮ್ಮ ಬಾಧ್ಯತೆಯನ್ನು ಕಳೆದುಕೊಳ್ಳಬಾರದು. ತಂದೆಯು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಪುತ್ರರಿಗೆ ಸೊತ್ತನ್ನು ಕೊಡಬೇಕು.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದಲ್ಲದೆ ಅರಸನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ. ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇದಲ್ಲದೆ ರಾಜನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗಬೇಕಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದಲ್ಲದೆ ಪ್ರಭುವು ಪ್ರಜೆಗಳ ಪಿತ್ರಾರ್ಜಿತ ಭೂವಿುಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು; ಸ್ವಂತ ಭೂವಿುಯನ್ನೇ ಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳಕೊಂಡು ದಿಕ್ಕಾಪಾಲಾಗಿ ಹೋದಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ರಾಜನು ತನ್ನ ಪ್ರಜೆಯ ಭೂಮಿಯನ್ನು ತನ್ನ ಉಪಯೋಗಕ್ಕೆಂದು ಬಲತ್ಕಾರದಿಂದ ಇಟ್ಟುಕೊಳ್ಳಬಾರದು ಅಥವಾ ತೆಗೆದುಕೊಳ್ಳಲೂಬಾರದು. ತನ್ನ ಸ್ವಂತ ಭೂಮಿಯಿಂದ ಪಾಲನ್ನು ತನ್ನ ಮಕ್ಕಳಿಗೆ ಕೊಡಬೇಕು. ಹೀಗೆ ನನ್ನ ಜನರು ತಮ್ಮ ಭೂಮಿಯನ್ನು ಕಳೆದುಕೊಳ್ಳುವದಿಲ್ಲ.” ಅಧ್ಯಾಯವನ್ನು ನೋಡಿ |