ಯೆಹೆಜ್ಕೇಲನು 46:19 - ಕನ್ನಡ ಸಮಕಾಲಿಕ ಅನುವಾದ19 ಆಮೇಲೆ ಅವನು ನನ್ನನ್ನು ಬಾಗಿಲಿನ ಪಕ್ಕದಲ್ಲಿದ್ದ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಅವುಗಳ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖವಾಗಿಯೂ, ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಬಳಿಕ ಆ ಪುರುಷ ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖನಾಗಿ ಹಾಗು ಯಾಜಕರಿಗೆ ನೇಮಕವಾಗಿ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದಲ್ಲಿ ಒಂದು ಸ್ಥಳವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಬಡಗಲಿಗೆ ಅಭಿಮುಖವಾಗಿಯೂ ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು; ಇಗೋ, ಅವುಗಳ ಹಿಂದೆ ಪಡುವಲಲ್ಲಿ ಒಂದು ಸ್ಥಳವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಬಳಿಕ ಆ ಪುರುಷನು ನನ್ನನ್ನು ಮಹಾದ್ವಾರದ ಪಕ್ಕದಲ್ಲಿನ ಪ್ರವೇಶಮಾರ್ಗವಾಗಿ ಉತ್ತರದಲ್ಲಿರುವ ಯಾಜಕರ ಪವಿತ್ರ ಕೋಣೆಗಳಿಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿ |