ಯೆಹೆಜ್ಕೇಲನು 46:2 - ಕನ್ನಡ ಸಮಕಾಲಿಕ ಅನುವಾದ2 ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ದಹನಬಲಿ ಪ್ರಾಣಿಯನ್ನು ಶಾಂತಿಸಮಾಧಾನ ಬಲಿಪ್ರಾಣಿಯನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಿಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪ್ರಭುವು ಹೊರಗಣ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು ತಾನು ಒಪ್ಪಿಸಿದ ಸರ್ವಾಂಗಹೋಮಪಶುವನ್ನೂ ಸಮಾಧಾನಯಜ್ಞಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಧಿಪತಿಯು ಆ ದ್ವಾರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಬದ ಬಳಿಯಲ್ಲಿ ನಿಲ್ಲುವನು. ಅಧಿಪತಿಯು ಕೊಡುವ ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞವನ್ನು ಆಗ ಯಾಜಕರು ಸಮರ್ಪಿಸುವರು. ಅಧಿಪತಿಯು ಆ ದ್ವಾರದ ಮುಂಭಾಗದಲ್ಲಿ ಆರಾಧಿಸುವನು. ಅನಂತರ ಅವನು ಹೊರಗೆ ಹೋಗುವನು. ಆ ದ್ವಾರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು. ಅಧ್ಯಾಯವನ್ನು ನೋಡಿ |
ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.