Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:20 - ಕನ್ನಡ ಸಮಕಾಲಿಕ ಅನುವಾದ

20 ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಅವನು ನನಗೆ, “ಯಾಜಕರು ಹವಿಸ್ಸನ್ನು ಹೊರಗಣ ಪ್ರಾಕಾರಕ್ಕೆ ಒಯ್ದು ಜನರನ್ನು ಶುದ್ಧಿಮಾಡದ ಹಾಗೆ, ಪ್ರಾಯಶ್ಚಿತ್ತ ಬಲಿಪಶುವಿನ ಮತ್ತು ದೋಷಪರಿಹಾರಕ ಬಲಿಪಶುವಿನ ಮಾಂಸವನ್ನು ಬೇಯಿಸುವುದಕ್ಕೂ ಧಾನ್ಯನೈವೇದ್ಯವನ್ನು ಪಕ್ವಮಾಡುವುದಕ್ಕೂ ಈ ಸ್ಥಳ ಏರ್ಪಟ್ಟಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಅವನು ನನಗೆ - ಯಾಜಕರು ಹವಿಸ್ಸನ್ನು ಹೊರಗಣ ಪ್ರಾಕಾರಕ್ಕೆ ಒಯ್ದು ಜನರನ್ನು ಶುದ್ಧಿಮಾಡದ ಹಾಗೆ ಪ್ರಾಯಶ್ಚಿತ್ತಯಜ್ಞಪಶುವಿನ ಮತ್ತು ದೋಷಪರಿಹಾರಕಯಜ್ಞಪಶುವಿನ ಮಾಂಸವನ್ನು ಬೇಯಿಸುವದಕ್ಕೂ ಧಾನ್ಯನೈವೇದ್ಯವನ್ನು ಪಕ್ವಮಾಡುವದಕ್ಕೂ ಈ ಸ್ಥಳವು ಏರ್ಪಟ್ಟಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕಯಜ್ಞದ ಮಾಂಸಗಳನ್ನು ಬೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:20
13 ತಿಳಿವುಗಳ ಹೋಲಿಕೆ  

ಹೀಗೆ ಕಟ್ಟಳೆಯ ಪ್ರಕಾರ ಪಸ್ಕದ ಮಾಂಸವನ್ನು ಬೆಂಕಿಯಿಂದ ಸುಟ್ಟರು. ಆದರೆ ಪರಿಶುದ್ಧವಾದವುಗಳನ್ನು ಗಡಿಗೆಗಳಲ್ಲಿಯೂ, ತಪ್ಪಲೆಗಳಲ್ಲಿಯೂ, ಕೊಪ್ಪರಿಗೆಗಳಲ್ಲಿಯೂ ಬೇಯಿಸಿ, ಶೀಘ್ರವಾಗಿ ಜನರೆಲ್ಲರಿಗೆ ಕಳುಹಿಸಿದರು.


ಧಾನ್ಯ ಸಮರ್ಪಣೆಯನ್ನು ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅವರು ತಿನ್ನಬೇಕು. ಇಸ್ರಾಯೇಲಿನಲ್ಲಿ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.


ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.


ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆಗಳನ್ನು ಹಾದುಹೋಗುವಂತೆ ಮಾಡಿದನು. ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳವನ್ನು ನಾನು ಕಂಡೆನು.


ಆ ದಿವಸದಲ್ಲಿ, ಕುದುರೆಗಳ ಘಂಟೆಗಳ ಮೇಲೆ ಯೆಹೋವ ದೇವರಿಗೆ ಪರಿಶುದ್ಧವು ಎಂದಿರುವುದು. ಯೆಹೋವ ದೇವರ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವುವು.


“ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸಬೇಕು.


“ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ಆಮೇಲೆ ಅವನು ನನಗೆ, “ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂಥ ಸ್ಥಳಗಳು ಎಂದು ಹೇಳಿದನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು