Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:24 - ಕನ್ನಡ ಸಮಕಾಲಿಕ ಅನುವಾದ

24 ಆಮೇಲೆ ಅವನು ನನಗೆ, “ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂಥ ಸ್ಥಳಗಳು ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಅವನು ನನಗೆ, “ಇವು ದೇವಾಲಯದ ಸೇವಕರು. ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸಿದ ಪಾಕಶಾಲೆಗಳು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಅವನು ನನಗೆ, “ಇವು ದೇವಾಲಯದ ಸೇವಕರು ಬಲಿಪ್ರಾಣಿಗಳನ್ನು ತಂದ ಜನರಿಗಾಗಿ ಅವುಗಳ ಮಾಂಸವನ್ನು ಬೇಯಿಸುವ ಪಾಕಶಾಲೆಗಳು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಅವನು ನನಗೆ - ಇವು ದೇವಾಲಯದ ಸೇವಕರು ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸುವ ಪಾಕಶಾಲೆಗಳು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವನು ನನಗೆ ಹೇಳಿದ್ದೇನೆಂದರೆ, “ಆಲಯದ ಈ ಸ್ಥಳದಲ್ಲಿ ಸೇವೆಮಾಡುವ ಜನರು ಸಾಮಾನ್ಯ ಜನರ ಯಜ್ಞದ ಮಾಂಸವನ್ನು ಆ ಜನರಿಗಾಗಿ ಬೇಯಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:24
8 ತಿಳಿವುಗಳ ಹೋಲಿಕೆ  

ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.


“ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಸೇವಕನು ಯಾರು?


ಅವುಗಳಲ್ಲಿ ಎಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಒಲೆಗಳಿದ್ದವು.


ಆ ಮನುಷ್ಯನು ನನ್ನನ್ನು ಮತ್ತೆ ಆಲಯದ ಬಾಗಿಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು, ಏಕೆಂದರೆ ಆಲಯದ ಮುಂಭಾಗದಲ್ಲಿ ನೀರು ಇತ್ತು. ಆ ನೀರು ಆಲಯದ ದಕ್ಷಿಣಕ್ಕೆ ಕೆಳಗಡೆ ಹರಿಯಿತು.


ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿಸುವವರಾಗಿರುವರು. ಆಲಯದ ಬಾಗಿಲುಗಳ ಮೇಲ್ವಿಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು. ಅವರು ಜನರಿಗೋಸ್ಕರ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡಿ ಅವರಿಗೆ ಸೇವೆ ಮಾಡುವ ಹಾಗೆ ಅವರ ಮುಂದೆ ನಿಲ್ಲುವರು.


ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆಗೋಸ್ಕರವೂ ಅದರಲ್ಲಿ ಮಾಡುವಂತಹ ಎಲ್ಲವುಗಳಿಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿಕೊಳ್ಳುವವರನ್ನಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು