Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:4 - ಕನ್ನಡ ಸಮಕಾಲಿಕ ಅನುವಾದ

4 ರಾಜಕುಮಾರನು ಯೆಹೋವ ದೇವರಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸಬ್ಬತ್ ದಿನದಲ್ಲಿ ಅರಸನು ಯೆಹೋವನಿಗೆ ಪೂರ್ಣಾಂಗವಾದ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಅರ್ಪಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಸಬ್ಬತ್‍ದಿನದಲ್ಲಿ ರಾಜನು ಸರ್ವೇಶ್ವರನಿಗೆ ಕಳಂಕರಹಿತವಾದ ಆರು ಕುರಿಗಳನ್ನೂ ಕಳಂಕರಹಿತವಾದ ಒಂದು ಟಗರನ್ನೂ ದಹನಬಲಿಯಾಗಿ ಅರ್ಪಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸಬ್ಬತ್‍ದಿನದಲ್ಲಿ ಪ್ರಭುವು ಯೆಹೋವನಿಗೆ ಪೂರ್ಣಾಂಗವಾದ ಆರು ಕುರಿಗಳನ್ನೂ ಪೂರ್ಣಾಂಗವಾದ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಅರ್ಪಿಸತಕ್ಕದ್ದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಸಬ್ಬತ್ ದಿವಸದಲ್ಲಿ ರಾಜನು ಯೆಹೋವನಿಗೆ ಸರ್ವಾಂಗಹೋಮವನ್ನು ಸಮರ್ಪಿಸುವನು. ಅವನು ಅದಕ್ಕಾಗಿ ನಿಷ್ಕಳಂಕವಾದ ಆರು ಕುರಿಗಳನ್ನೂ ನಿಷ್ಕಳಂಕವಾದ ಒಂದು ಟಗರನ್ನೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:4
4 ತಿಳಿವುಗಳ ಹೋಲಿಕೆ  

ಹಬ್ಬಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವಿಶ್ರಾಂತಿಯ ದಿನಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವುದು ಪ್ರಭುವಿನ ಕೆಲಸವಾಗಿರುವುದು. ಆತನು ಇಸ್ರಾಯೇಲ್ಯರಿಗೆ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಳನ್ನು, ಧಾನ್ಯದ ಅರ್ಪಣೆಗಳನ್ನು, ದಹನಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಒದಗಿಸುವನು.


ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಎಂದರೆ, ಹೋರಿಗೆ ಸುಮಾರು ಎರಡು ಲೀಟರ್ ದ್ರಾಕ್ಷಾರಸವು, ಟಗರಿಗೆ ಸುಮಾರು ಒಂದುವರೆ ಲೀಟರ್ ದ್ರಾಕ್ಷಾರಸವು, ಕುರಿಮರಿಗೆ ಸುಮಾರು ಒಂದು ಲೀಟರ್ ದ್ರಾಕ್ಷಾರಸವು ಇರಬೇಕು. ಇದು ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ದಹನಬಲಿಯನ್ನು ಅರ್ಪಿಸಬೇಕು.


ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ದೋಷಪರಿಹಾರ ಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು