ಯೆಹೆಜ್ಕೇಲನು 46:9 - ಕನ್ನಡ ಸಮಕಾಲಿಕ ಅನುವಾದ9 “ ‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿನಿಂದ ಆರಾಧಿಸುವುದಕ್ಕೆ ಪ್ರವೇಶಿಸಿದವನು ದಕ್ಷಿಣ ಬಾಗಿಲಿಂದ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನಿಂದ ಪ್ರವೇಶಿಸಿದವನು ಉತ್ತರ ಬಾಗಿಲಿನಿಂದ ಹೊರಗೆ ಹೋಗಬೇಕು. ತಾನು ಪ್ರವೇಶಿಸಿದ ಬಾಗಿಲಿನಿಂದ ಹಿಂದಿರುಗದೆ ಅದಕ್ಕೆ ಎದುರಾಗಿರುವ ಬಾಗಿಲಿಂದ ಹೊರಗೆ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾಡಿನ ಜನರಾದರೋ ಹಬ್ಬಗಳಲ್ಲಿ ಸರ್ವೇಶ್ವರನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿಂದ ಆರಾಧಿಸುವುದಕ್ಕೆ ಪ್ರವೇಸಿಸಿದವರು ದಕ್ಷಿಣ ಬಾಗಿಲಿಂದ ಹೊರಡಲಿ; ದಕ್ಷಿಣ ಬಾಗಿಲಿಂದ ಪ್ರವೇಶಿಸಿದವನು ಉತ್ತರ ಬಾಗಿಲಿಂದ ಹಿಂದಿರುಗದೆ ಬಂದ ಮುಖವಾಗಿಯೇ ಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಬಡಗಣ ಬಾಗಿಲಿಂದ ಆರಾಧಿಸುವದಕ್ಕೆ ಪ್ರವೇಶಿಸಿದವನು ತೆಂಕಣ ಬಾಗಿಲಿಂದ ಹೊರಡಲಿ; ತೆಂಕಣ ಬಾಗಿಲಿಂದ ಪ್ರವೇಶಿಸಿದವನು ಬಡಗಣ ಬಾಗಿಲಿಂದ ಹೊರಡಲಿ; ತಾನು ಪ್ರವೇಶಿಸಿದ ಬಾಗಿಲಿಂದ ಹಿಂದಿರುಗದೆ ಬಂದ ಮುಖವಾಗಿಯೇ ಹೋಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಸಾಮಾನ್ಯ ಜನರು ವಿಶೇಷ ಹಬ್ಬದ ದಿವಸಗಳಲ್ಲಿ ಯೆಹೋವನನ್ನು ಸಂಧಿಸಲು ಬರುವಾಗ ಉತ್ತರ ದ್ವಾರದಿಂದ ಬರುವವರು ದಕ್ಷಿಣ ದ್ವಾರದ ಮೂಲಕ ಹೊರಗೆ ಹೋಗಬೇಕು. ದಕ್ಷಿಣದ ದ್ವಾರದಿಂದ ಒಳ ಪ್ರವೇಶಿಸುವವನು ಉತ್ತರ ದ್ವಾರದ ಮೂಲಕ ಹೊರಗೆ ಹೋಗಬೇಕು. ಯಾರೂ ಬಂದ ದಾರಿಯಿಂದ ಹಿಂದೆ ಹೋಗಬಾರದು. ಪ್ರತಿಯೊಬ್ಬನೂ ನೇರವಾಗಿ ಮುಂದಕ್ಕೆ ಹೋಗಬೇಕು. ಅಧ್ಯಾಯವನ್ನು ನೋಡಿ |