Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:1 - ಕನ್ನಡ ಸಮಕಾಲಿಕ ಅನುವಾದ

1 ಆ ಮನುಷ್ಯನು ನನ್ನನ್ನು ಮತ್ತೆ ಆಲಯದ ಬಾಗಿಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು, ಏಕೆಂದರೆ ಆಲಯದ ಮುಂಭಾಗದಲ್ಲಿ ನೀರು ಇತ್ತು. ಆ ನೀರು ಆಲಯದ ದಕ್ಷಿಣಕ್ಕೆ ಕೆಳಗಡೆ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದುತಂದನು; ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರತಂದನು; ಆಹಾ, ದೇವಸ್ಥಾನದ ಹೊಸ್ತಲ ಕೆಳಗಿನಿಂದ ನೀರು ಹೊರಟು ಮೂಡಲಿಗೆ ಹರಿಯುತ್ತಿತ್ತು (ದೇವಸ್ಥಾನವು ಪೂರ್ವಾಭಿಮುಖವಷ್ಟೆ); ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅವನು ಆಲಯದ ಪ್ರವೇಶ ದ್ವಾರಕ್ಕೆ ನನ್ನನ್ನು ಕರೆದುಕೊಂಡು ಹೋದನು. ನಾನು ಅಲ್ಲಿ ಆಲಯದ ಪೂರ್ವ ದ್ವಾರದ ಕೆಳಗಡೆಯಿಂದ ಹರಿಯುವ ನೀರನ್ನು ಕಂಡೆನು. ಆಲಯದ ಮುಂಭಾಗ ಪೂರ್ವ ದಿಕ್ಕಿನಲ್ಲಿದೆ. ಆ ನೀರು ಆಲಯದ ದಕ್ಷಿಣದ ಭಾಗದ ಕೆಳಗಿನಿಂದ ಹರಿಯುತ್ತಾ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:1
20 ತಿಳಿವುಗಳ ಹೋಲಿಕೆ  

ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಆ ದಿವಸದಲ್ಲಿ ಆಗುವುದೇನೆಂದರೆ: ಯೆರೂಸಲೇಮಿನೊಳಗಿಂದ ಜೀವವುಳ್ಳ ಪ್ರವಾಹವು ಹೊರಡುವುದು. ಅದರಲ್ಲಿ ಅರ್ಧಭಾಗವು ಪೂರ್ವದ ಉಪ್ಪು ಸಮುದ್ರಕ್ಕೆ ಮತ್ತು ಅರ್ಧಭಾಗವು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೆ ಹರಿಯುತ್ತದೆ. ಅದು ಬೇಸಿಗೆ ಕಾಲದಲ್ಲಿಯೂ, ಚಳಿಗಾಲದಲ್ಲಿಯೂ ಇರುವುದು.


ಆ ದಿವಸದಲ್ಲಿ ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವುವು. ಗುಡ್ಡಗಳು ಹಾಲಿನಿಂದ ಹರಿಯುವುವು. ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವುವು. ಯೆಹೋವ ದೇವರ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ಕಣಿವೆಗೆ ಜಲ ಕೊಡುವುದು.


ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನೂ ಬರಲಿ. ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ. ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ.


“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.


ನದಿಯ ಎರಡೂ ದಡಗಳಲ್ಲಿ ಆಹಾರಕ್ಕಾಗಿ ಎಲ್ಲಾ ತರಹದ ಮರಗಳು ಬೆಳೆಯುವುವು. ಅವುಗಳ ಎಲೆಗಳು ಬಾಡುವುದಿಲ್ಲ. ಅವುಗಳ ಹಣ್ಣು ಮುಗಿದುಹೋಗುವುದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸುವುವು. ಏಕೆಂದರೆ ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟುಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಅವುಗಳ ಎಲೆಗಳು ಔಷಧಕ್ಕೂ ಆಗುವುವು.”


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


ಬಾಗಿಲಿನ ಅಗಲವು ಸುಮಾರು ಐದು ಮೀಟರ್ ಮತ್ತು ಅದರ ಎರಡೂ ಬದಿಗಳಲ್ಲಿ ಗೋಡೆಗಳ ಅಗಲ ಸುಮಾರು ಎರಡೂವರೆ ಮೀಟರ್. ಅವನು ಮುಖ್ಯಸಭಾಂಗಣವನ್ನೂ ಅಳೆದನು. ಅದು ಸುಮಾರು ಇಪ್ಪತ್ತೊಂದು ಮೀಟರ್ ಉದ್ದ ಮತ್ತು ಸುಮಾರು ಹನ್ನೊಂದು ಮೀಟರ್ ಅಗಲವಿತ್ತು.


ಮಹಾ ಸಂಹಾರದ ದಿವಸದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು ನೀರಿನ ಕಾಲುವೆಗಳೂ ಹರಿಯುತ್ತಿರುವುವು.


ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.


ಆಮೇಲೆ ಅವನು ನನಗೆ, “ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂಥ ಸ್ಥಳಗಳು ಎಂದು ಹೇಳಿದನು.”


ಆಮೇಲೆ ಅವನು ನನ್ನನ್ನು ಬಾಗಿಲಿನ ಮಾರ್ಗವಾಗಿ ಉತ್ತರದ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಿಲಿನವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಮತ್ತು ದಕ್ಷಿಣ ಭಾಗದಿಂದ ನೀರು ಜಿನುಗುತ್ತಿತ್ತು.


ಆ ದಿವಸದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವದಿಕ್ಕಿನಲ್ಲಿರುವ ಓಲಿವ್ ಮರಗಳ ಗುಡ್ಡದ ಮೇಲೆ ನಿಲ್ಲುವುವು. ಆ ಗುಡ್ಡವು, ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವುದು. ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದುಕೊಳ್ಳುವುದು.


ದೇವರು ಅದರ ಮಧ್ಯದಲ್ಲಿ ಇದ್ದಾರೆ, ಅದು ಕದಲದು; ದೇವರು ಉದಯಕಾಲದಲ್ಲಿ ಅದಕ್ಕೆ ಸಹಾಯ ಮಾಡುವರು.


“ನನ್ನ ಎಲ್ಲಾ ಬುಗ್ಗೆಗಳು ನಿಮ್ಮಲ್ಲಿಯೇ ಇವೆ,” ಎಂದು ಸಂಗೀತಕಾರರು ಹಾಡುವರು.


ಆಮೇಲೆ ಅವನು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಬಾಗಿಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಿಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು