Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:11 - ಕನ್ನಡ ಸಮಕಾಲಿಕ ಅನುವಾದ

11 ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಶುದ್ಧವಾಗುವುದಿಲ್ಲ. ಅವು ಉಪ್ಪಿನ ಗಣಿಯಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಅದರ ಸುತ್ತಣ ಕೆಸರಾದ ಸ್ಥಳಗಳು, ಕೊಳಚೆಗಳು ಸಿಹಿಯಾಗುವುದಿಲ್ಲ. ಅವು ಉಪ್ಪಿನ ಗಣಿಯಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೆ ಅದರ ಸುತ್ತಣ ಜವುಗುನೆಲವೂ ಸವುಳುಹೊಂಡಗಳೂ ಸಿಹಿಯಾಗುವುದಿಲ್ಲ, ಅವು ಉಪ್ಪಿನ ಗಣಿಯಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ಅದರ ಸುತ್ತಣ ಜವುಗು ನೆಲವೂ ಸವುಳುಹೊಂಡಗಳೂ ಸಿಹಿಯಾಗುವದಿಲ್ಲ, ಅವು ಉಪ್ಪಿನ ಗಣಿಯಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಜವುಗು ನೆಲಗಳೂ ಸವುಳು ನೆಲಗಳೂ ಸಿಹಿಯಾಗುವದಿಲ್ಲ. ಅವು ಉಪ್ಪು ತಯಾರಿಸುವದಕ್ಕಾಗಿ ಉಪಯೋಗಿಸಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:11
11 ತಿಳಿವುಗಳ ಹೋಲಿಕೆ  

ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಅವನು ಅಡವಿಯಲ್ಲಿರುವ ಜಾಲಿ ಗಿಡದ ಹಾಗಿರುವನು. ಒಳ್ಳೆಯದು ಬರುವಾಗ ನೋಡದೆ ಇರುವನು. ನಿವಾಸಿಗಳಿಲ್ಲದ ಚೌಳು ನೆಲವಾಗಿರುವ ಮರುಭೂಮಿಯ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ, ಪಟ್ಟಣವನ್ನು ಹಿಡಿದು, ಅದರಲ್ಲಿದ್ದ ಜನರನ್ನು ಕೊಂದು, ಪಟ್ಟಣವನ್ನು ಕೆಡವಿಬಿಟ್ಟು, ಅದರಲ್ಲಿ ಉಪ್ಪು ಎರಚಿಬಿಟ್ಟನು.


ನದಿಯ ಎರಡೂ ದಡಗಳಲ್ಲಿ ಆಹಾರಕ್ಕಾಗಿ ಎಲ್ಲಾ ತರಹದ ಮರಗಳು ಬೆಳೆಯುವುವು. ಅವುಗಳ ಎಲೆಗಳು ಬಾಡುವುದಿಲ್ಲ. ಅವುಗಳ ಹಣ್ಣು ಮುಗಿದುಹೋಗುವುದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸುವುವು. ಏಕೆಂದರೆ ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟುಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಅವುಗಳ ಎಲೆಗಳು ಔಷಧಕ್ಕೂ ಆಗುವುವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು