Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:16 - ಕನ್ನಡ ಸಮಕಾಲಿಕ ಅನುವಾದ

16 ಹಮಾತೂ ಬೇರೋತವು, ದಮಸ್ಕದವರೆಗೂ ಹಾಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಮಾತ್, ಬೇರೋತ, ದಮಸ್ಕದವರೆಗೂ ಹಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೆತ್ಲೋನಿನ ಮಾರ್ಗವಾಗಿ ಬಂದು ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಲ್ಲಿಂದ ಬೇರೋತ್ ಕಡೆಗೂ ಅಲ್ಲಿಂದ ಸಿಬ್ರಯಿಮ್ (ಇದು ದಮಸ್ಕ ಮತ್ತು ಹಾಮತ್‌ಗಳ ಮೇರೆಯಲ್ಲಿದೆ) ಕಡೆಗೂ ಅಲ್ಲಿಂದ ಹಾಚೇರ್ ಕಡೆಗೂ ಅಲ್ಲಿಂದ ಹತ್ತೀಕೋನ್ (ಇದು ಹವಾನದ ಮೇರೆಯಲ್ಲಿದೆ) ಕಡೆಗೂ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:16
15 ತಿಳಿವುಗಳ ಹೋಲಿಕೆ  

“ಗೋತ್ರಗಳ ಹೆಸರುಗಳು ಯಾವುವೆಂದರೆ: “ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಯೂ ಹಾಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಕಡೆಗಳು, ದಾನ್ ಗೋತ್ರಕ್ಕೆ ಒಂದು ಭಾಗವಾಗಿದೆ.


ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ, ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು.


ಆಗ ಅವರು ಏರಿಹೋಗಿ ಚಿನ್ ಎಂಬ ಮರುಭೂಮಿಯಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನವರೆಗೂ ದೇಶವನ್ನು ಸಂಚರಿಸಿ ನೋಡಿದರು.


ಹಮಾತು, ಬಹಳ ಜ್ಞಾನವಿರುವ ಟೈರ್, ಸೀದೋನ್ ಸಹ ಅದರ ಮೇರೆಯಾಗಿದೆ.


ಅಬ್ರಾಮನು ರಾತ್ರಿಯಲ್ಲಿ ಅವರಿಗೆ ವಿರೋಧವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ, ಅವರನ್ನು ಹೊಡೆದು, ದಮಸ್ಕದ ಉತ್ತರದಲ್ಲಿ ಹೋಬಾದವರೆಗೆ ಅವರನ್ನು ಸೋಲಿಸಿದನು.


ಈ ಮಾರ್ಗಕ್ಕೆ ಸಂಬಂಧಪಟ್ಟ ಪುರುಷರಾಗಲಿ ಸ್ತ್ರೀಯರಾಗಲಿ ದಮಸ್ಕದಲ್ಲಿದ್ದರೆ ಅವರನ್ನು ತಾನು ಬಂಧಿಸಿ ಯೆರೂಸಲೇಮಿಗೆ ತರಲಿಕ್ಕಾಗುವಂತೆ ದಮಸ್ಕದಲ್ಲಿಯ ಸಭಾಮಂದಿರಗಳಿಗೆ ಕೊಡಲು ಮಹಾಯಾಜಕನಿಂದ ಪತ್ರ ಪಡೆದುಕೊಂಡನು.


ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುವೆನು. ಲೆಬೊ ಹಮಾತಿನ ಪ್ರದೇಶದಿಂದ ಅರಾಬಾ ತಗ್ಗಿನ ನದಿಯವರೆಗೂ ನಿಮ್ಮನ್ನು ಹಿಂಸಿಸುವರು.


ಹೀಗೆ ಹಚರ್ ಏನಾನೂ ದಮಸ್ಕದ ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಾಮಾತಿನ ಮೇರೆಯೂ ಉತ್ತರದ ಕಡೆಯಾಗಿರುವುದು. ಇದು ಉತ್ತರ ಮೇರೆ.


ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.


ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ತಮ್ಮ ದೇವರಾದ ಯೆಹೋವ ದೇವರ ಮುಂದೆ ಏಳೇಳು ದಿನಗಳು ಅಂದರೆ ಹದಿನಾಲ್ಕು ದಿವಸ ಹಬ್ಬವನ್ನು ಆಚರಿಸಿದರು.


ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ನೀವು ಲೆಬೊ ಹಮಾತಿನ ಪ್ರದೇಶದವರೆಗೆ ಸಾಲು ಮಾಡಿರಿ. ಮೇರೆಯು ಚೆದಾದಿಗೆ ಹೊರಟು


ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ?


“ ‘ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನು ಹಾಗೂ ಚಾಹರಿನ ಉಣ್ಣೆಯನ್ನು ನಿನ್ನಲ್ಲಿ ತುಂಬಿಸುತ್ತಿದ್ದರು.


ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಲವಣ ಸಮುದ್ರದಿಂದ ಮತ್ತು ತಾಮರ್ ನೀವು ಅಳೆಯಬೇಕು. ಇದೇ ಪೂರ್ವದಿಕ್ಕಿನ ಮೇರೆಯಾಗಿದೆ.


ಉತ್ತರದ ಮೇರೆಯಿಂದ ಹಮಾತಿನ ಪ್ರದೇಶದವರೆಗೂ ಇರುವ ದೊಡ್ಡ ಸಮುದ್ರವು ಪಶ್ಚಿಮದ ಕಡೆಗಿದೆ. ಇದೇ ಪಶ್ಚಿಮದ ಮೇರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು