ಯೆಹೆಜ್ಕೇಲನು 47:4 - ಕನ್ನಡ ಸಮಕಾಲಿಕ ಅನುವಾದ4 ಅವನು ಸಾವಿರಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಸೊಂಟದವರೆಗೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವನು ಪುನಃ ಐನೂರು ಮೀಟರ್ ಅಳೆದು ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಮತ್ತೆ ಐನೂರು ಮೀಟರ್ ಅಳೆದು ನನ್ನನ್ನು ನೀರಿನ ಆಚೆ ದಾಟಿಸುವಾಗ ಆ ನೀರು ಸೊಂಟದವರೆಗೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ಪುನಃ ಸಾವಿರ ಮೊಳ ಅಳೆದು ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಪುನಃ ಸಾವಿರ ಮೊಳ ಅಳೆದು ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ನೀರು ಸೊಂಟದವರೆಗೆ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವನು ತಿರುಗಿ ಸಾವಿರ ಮೊಳ ಅಳೆದನು. ಆ ಜಾಗದಲ್ಲಿದ್ದ ನೀರಿನಲ್ಲಿ ನನಗೆ ನಡೆಯಲು ಹೇಳಿದನು. ಅಲ್ಲಿ ನೀರು ನನ್ನ ಮೊಣಕಾಲಿನಷ್ಟು ಆಳವಿತ್ತು. ತಿರುಗಿ ಅವನು ಸಾವಿರ ಮೊಳದಷ್ಟು ದೂರ ಅಳತೆ ಮಾಡಿದನು. ಆ ಸ್ಥಳದಲ್ಲಿ ನೀರಿನಲ್ಲಿ ನಡೆಯಲು ಹೇಳಿದನು. ಅಲ್ಲಿ ನೀರು ನನ್ನ ಸೊಂಟದಷ್ಟು ಆಳವಾಗಿತ್ತು. ಅಧ್ಯಾಯವನ್ನು ನೋಡಿ |