ಯೆಹೆಜ್ಕೇಲನು 47:5 - ಕನ್ನಡ ಸಮಕಾಲಿಕ ಅನುವಾದ5 ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂಥ ನದಿಯಾಗಿತ್ತು. ಏಕೆಂದರೆ ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ಮತ್ತೆ ಸಾವಿರ ಮೊಳ ಅಳೆದನು. ಅದು ನನ್ನಿಂದ ದಾಟಲಾಗದ ನದಿಯಾಗಿತ್ತು; ನೀರು ಆಳವಾಗಿ ಈಜಾಡುವಷ್ಟು ಪ್ರವಾಹವಾಗಿತ್ತು, ದಾಟಲಾಗದ ನದಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವನು ಮತ್ತೆ ಅಳೆದು ಐನೂರು ಮೀಟರ್ ಅಳೆದಾಗ ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು. ದಾಟಲಾಗದ ತೊರೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ಮತ್ತೆ ಸಾವಿರ ಮೊಳ ಅಳೆದನು; ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು; ದಾಟಲಾಗದ ತೊರೆಯಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವನು ಇನ್ನೂ ಒಂದು ಸಾವಿರ ಮೊಳ ದೂರ ಅಳೆದನು. ಅಲ್ಲಿ ನೀರು ಹೆಚ್ಚಿದ್ದು ನನ್ನಿಂದ ದಾಟಲು ಆಗದಷ್ಟು ಆಳವಿತ್ತು. ಅದು ನದಿಯಾಗಿತ್ತು. ಆ ನೀರಿನಲ್ಲಿ ಈಜಾಡಬಹುದಾಗಿತ್ತು. ದಾಟಲಾಗದ ಆಳವಾದ ಹೊಳೆಯಾಗಿತ್ತು. ಅಧ್ಯಾಯವನ್ನು ನೋಡಿ |