Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:9 - ಕನ್ನಡ ಸಮಕಾಲಿಕ ಅನುವಾದ

9 ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂಥ ಸಮಸ್ತ ಜೀವಿಗಳು ಬದುಕುವುವು ಮತ್ತು ಮೀನುಗಳ ಬಹುದೊಡ್ಡ ಸಮೂಹವಾಗುವುವು. ಏಕೆಂದರೆ ಈ ನೀರು ಅಲ್ಲಿಗೆ ಬರುವಾಗ ಅವು ಶುದ್ಧವಾಗುವುವು. ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ನದಿಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲ ವಿಧವಾದ ಜಲಜಂತುಗಳು ಬದುಕಿ ಬಾಳುವವು; ಮೀನುಗಳು ಗುಂಪು ಗುಂಪಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು, ಆ ನೀರೂ ಸಿಹಿಯಾಗುವುದು. ಈ ನದಿಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪುಗುಂಪಾಗಿ ಚಲಿಸುವ ಸಕಲವಿಧ ಜಲಜಂತುಗಳು ಬದುಕಿ ಬಾಳುವುವು; ಮೀನುಗಳು ತಂಡೋಪ ತಂಡವಾಗಿರುವುವು. ಈ ನೀರು ಸಮುದ್ರಕ್ಕೆ ಬೀಳಲು ಆ ನೀರೂ ಸಿಹಿಯಾಗುವುದು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ತೊರೆಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪುಗುಂಪಾಗಿ ಚಲಿಸುವ ಸಕಲವಿಧ ಜಲಜಂತುಗಳು ಬದುಕಿಬಾಳುವವು; ಮೀನುಗಳು ತಂಡೋಪತಂಡವಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು [ಆ ನೀರೂ] ಸಿಹಿಯಾಗುವದು; ಈ ತೊರೆಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇದು ಮೃತ್ಯುಸಮುದ್ರವನ್ನು ಸೇರಿದಾಗ ಅದರ ನೀರು ಹೊಸದಾಗಿ ಶುದ್ಧವಾಗುವದು. ನೀರಿನಲ್ಲಿ ನಾನಾ ತರದ ಮೀನುಗಳು ಜೀವಿಸುವವು, ಮತ್ತು ಆ ಹೊಳೆಯು ಹರಿಯುವಲ್ಲೆಲ್ಲಾ ವಿವಿಧ ಜಾತಿಯ ಪ್ರಾಣಿಗಳು ವಾಸಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:9
27 ತಿಳಿವುಗಳ ಹೋಲಿಕೆ  

ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನೂ ಬರಲಿ. ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ. ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ.


ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು, ನದಿಗಳನ್ನು ನೀರನ್ನು ಹರಿಯಮಾಡಿದರು.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.


ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.


ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.


“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ಇವರು ದೂರದಿಂದ ಬರುತ್ತಾರೆ. ಇವರು ಉತ್ತರದಿಂದ ಮತ್ತು ಪಶ್ಚಿಮದಿಂದ ಇವರು ಸೀನಿಮ್ ದೇಶದಿಂದ ಬರುತ್ತಿದ್ದಾರೆ.”


ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.


ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.


ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ. ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


“ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.


ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.


ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು.


ಆದರೂ ಹೆಚ್ಚು ಜನ ಪುರುಷರೂ ಸ್ತ್ರೀಯರೂ ಕರ್ತ ದೇವರಲ್ಲಿ ವಿಶ್ವಾಸವನ್ನಿಟ್ಟು ಅವರ ಜೊತೆ ಸೇರಿಕೊಂಡರು. ಅವರು ವಿಶ್ವಾಸಿಗಳ ಸಂಖ್ಯೆಯಲ್ಲಿ ಸೇರಿದರು.


ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು