Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:1 - ಕನ್ನಡ ಸಮಕಾಲಿಕ ಅನುವಾದ

1 “ಗೋತ್ರಗಳ ಹೆಸರುಗಳು ಯಾವುವೆಂದರೆ: “ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಯೂ ಹಾಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಕಡೆಗಳು, ದಾನ್ ಗೋತ್ರಕ್ಕೆ ಒಂದು ಭಾಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹಂಚುವಿಕೆಯನ್ನು ಅನುಸರಿಸಿ ಕುಲಗಳ ಹೆಸರುಗಳು ಇವೇ. ದೇಶದ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನ್ ಕುಲಕ್ಕೆ ಒಂದು ಭಾಗವಿದೆ. ಅದರ ಉತ್ತರ ಮೇರೆಯು ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು, ಹಮಾತಿನ ದಾರಿಯನ್ನು ದಾಟಿ, ದಮಸ್ಕದ ಮೇರೆಯಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು. ಅದರ ಕಡೆಗಳು ದೇಶದ ಪೂರ್ವ, ಪಶ್ಚಿಮಗಳ ಮೇರೆಗಳ ತನಕ ಚಾಚಿಕೊಂಡಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಕುಲಗಳ ಹೆಸರುಗಳು ಇವು: ನಾಡಿನ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನಿಗೆ ಒಂದು ಪಾಲು; ಅದರ ಉತ್ತರದ ಮೇರೆ ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು ಹಮಾತಿನ ದಾರಿಯನ್ನು ದಾಟಿ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಹಂಚುವಿಕೆಯನ್ನು ಅನುಸರಿಸಿ] ಕುಲಗಳ ಹೆಸರುಗಳು ಇವೇ; [ದೇಶದ] ಕೇವಲ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನಿಗೆ ಒಂದು ಪಾಲು; ಅದರ ಬಡಗಣ ಮೇರೆಯು ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು ಹಮಾತಿನ ದಾರಿಯನ್ನು ದಾಟಿ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವದು; ಅದರ ಪಾರ್ಶ್ವಗಳು [ದೇಶದ] ಪೂರ್ವಪಶ್ಚಿಮಗಳ [ಎಲ್ಲೆಗಳ] ತನಕ ಚಾಚಿಕೊಂಡಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1-7 “ಉತ್ತರದ ಮೇರೆಯು ಭೂಮಧ್ಯ ಸಮುದ್ರದಿಂದ ಪೂರ್ವಕ್ಕೆ ಹೋಗಿ ಅಲ್ಲಿಂದ ಹೆತ್ಲೋನಿಗೂ ಅಲ್ಲಿಂದ ಹಮಾತ್ ಕಣಿವೆಗೂ ಅಲ್ಲಿಂದ ಹಚರ್ ಏನಾನಿಗೂ ಹೋಗುವುದು. ಈ ಸ್ಥಳವು ಹಮಾತ್ ಮತ್ತು ದಮಸ್ಕಸ್‌ನ ಗಡಿಯಲ್ಲಿರುವದು. ಪೂರ್ವದ ಗಡಿಯಿಂದ ಪಶ್ಚಿಮದ ತನಕ ಹೋಗುವ ಈ ಪ್ರಾಂತ್ಯದಲ್ಲಿ ಇಸ್ರೇಲಿನ ದಾನ್, ಆಶೇರ್, ನಫ್ತಾಲಿ, ಮನಸ್ಸೆ, ಎಫ್ರಾಯೀಮ್ ರೂಬೇನ್ ಮತ್ತು ಯೆಹೂದ ಕುಲದ ಜನರಿಗೆ ಭೂಮಿಯು ಸಿಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:1
16 ತಿಳಿವುಗಳ ಹೋಲಿಕೆ  

ಉತ್ತರದ ಮೇರೆಯಿಂದ ಹಮಾತಿನ ಪ್ರದೇಶದವರೆಗೂ ಇರುವ ದೊಡ್ಡ ಸಮುದ್ರವು ಪಶ್ಚಿಮದ ಕಡೆಗಿದೆ. ಇದೇ ಪಶ್ಚಿಮದ ಮೇರೆ.


ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.


ವಿದೇಶಿಯರು ಯಾವ ಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಅವರಿಗೆ ಸೊತ್ತನ್ನು ಕೊಡಬೇಕು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಈ ಪಟ್ಟಣಗಳೂ, ಅವುಗಳ ಗ್ರಾಮಗಳೂ, ದಾನ್ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾಗಿದೆ. ಯೋಸೇಫನಿಗೆ ಎರಡು ಪಾಲುಗಳು ಕೊಡಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು