ಯೆಹೆಜ್ಕೇಲನು 48:11 - ಕನ್ನಡ ಸಮಕಾಲಿಕ ಅನುವಾದ11 ಇದು ನನಗೆ ನಂಬಿಗಸ್ತರಾಗಿ ನಡೆದುಕೊಂಡ ಚಾದೋಕನ ಪುತ್ರರಲ್ಲಿ ಪ್ರತಿಷ್ಠಿತರಾಗಿರುವ ಯಾಜಕರದಾಗಿರಬೇಕು; ಇಸ್ರಾಯೇಲರು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ಚಾದೋಕಿನವರು ತಪ್ಪಿಹೋಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ, ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ಕ್ಷೇತ್ರ ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರು ಹಾಗು ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರು ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು; ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈ ಭೂಮಿಯು ಚಾದೋಕನ ಸಂತತಿಯವರಿಗಿರುವದು. ಆ ಜನರು ನನ್ನ ಪರಿಶುದ್ಧ ಯಾಜಕರಾಗಿ ಆರಿಸಲ್ಪಟ್ಟಿರುತ್ತಾರೆ. ಯಾಕೆಂದರೆ ಇಸ್ರೇಲಿನ ಇತರ ಜನರು ನನ್ನನ್ನು ಬಿಟ್ಟು ತೊಲಗಿದರೂ ಇವರು ನನಗೆ ಸೇವೆಮಾಡುವದನ್ನು ಮುಂದುವರಿಸುತ್ತಿದ್ದರು. ಲೇವಿಕುಲದ ಜನರಂತೆ ಚಾದೋಕನ ಸಂತತಿಯವರು ನನ್ನನ್ನು ಬಿಟ್ಟುಹೋಗಲಿಲ್ಲ. ಅಧ್ಯಾಯವನ್ನು ನೋಡಿ |