Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:13 - ಕನ್ನಡ ಸಮಕಾಲಿಕ ಅನುವಾದ

13 “ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಒಟ್ಟು ಉದ್ದ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಮೇರೆಯ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು. ಈ ಎರಡು ಪಾಲುಗಳ ಒಟ್ಟು ಅಳತೆ ಎಷ್ಟೆಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ ಮತ್ತು ಅಗಲವು ಇಪ್ಪತ್ತು ಸಾವಿರ ಮೊಳವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹನ್ನೆರಡುವರೆ ಕಿಲೋಮೀಟರ್ ಉದ್ದದ, ಐದು ಕಿಲೋಮೀಟರ್ ಅಗಲದ, ಒಂದು ಪಾಲು ಯಾಜಕರ ಪಾಲಿನ ಸರಹದ್ದಿಗೆ ಪಕ್ಕದಲ್ಲಿ, ಲೇವಿಯರಿಗೆ ಸಲ್ಲತಕ್ಕ; ಈ ಎರಡು ಪಾಲುಗಳ ಒಟ್ಟಳತೆ ಎಷ್ಟೆಂದರೆ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ, ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಸರಹದ್ದಿಗೆ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು; [ಈ ಎರಡು ಪಾಲುಗಳ] ಒಟ್ಟಳತೆ ಎಷ್ಟಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಯಾಜಕರ ಭೂಮಿಯ ಪಕ್ಕದಲ್ಲಿ ಲೇವಿಯರ ಪಾಲಿನ ಭೂಮಿ ಇರುವದು. ಇದರ ಉದ್ದ ಇಪ್ಪತ್ತೈದು ಸಾವಿರ ಮೊಳ; ಅಗಲ ಹತ್ತು ಸಾವಿರ ಮೊಳ. ಈ ಎರಡು ಪಾಲುಗಳ ಒಟ್ಟಳತೆ ಇಪ್ಪತ್ತೈದು ಸಾವಿರ ಮೊಳ ಉದ್ದ, ಇಪ್ಪತ್ತು ಸಾವಿರ ಮೊಳ ಅಗಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:13
8 ತಿಳಿವುಗಳ ಹೋಲಿಕೆ  

ಮನೆಯಿಂದ ಮನೆಗೆ ಹೋಗದೆ, ಅದೇ ಮನೆಯಲ್ಲಿದ್ದು, ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ. ಕೆಲಸದವನು ತನ್ನ ಕೂಲಿಗೆ ಯೋಗ್ಯನು.


ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆ ಮಾಡುವ ಲೇವಿಯರಿಗೆ ತಮಗೆ ಸೊತ್ತಾಗಿ ಇಪ್ಪತ್ತು ಕೊಠಡಿಗಳಿಗಾಗಿ ಇರಬೇಕು.


ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಮತ್ತು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು.


ನೀವು ಭೂಮಿಯ ಮೇಲೆ ಜೀವಿಸುವವರೆಗೆ ಲೇವಿಯರನ್ನು ಬಿಟ್ಟು ಬಿಡದ ಹಾಗೆ ನೋಡಿಕೊಳ್ಳಿರಿ.


ಮೀಸಲಾಗಿರುವ ಈ ನಾಡಿನ ವಿಶೇಷ ಕಾಣಿಕೆಯು ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧವಾದದ್ದಾಗಿರಬೇಕು.


ಅವರು ಅದರಲ್ಲಿ ಏನನ್ನೂ ಮಾರಬಾರದು, ಏನನ್ನೂ ಬದಲಾಯಿಸಬಾರದು. ದೇಶದ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವ ದೇವರಿಗೆ ಪರಿಶುದ್ಧವಾಗಿದೆ.


“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಆದರೆ ಅವರ ಪಟ್ಟಣಗಳ ಉಪನಗರಗಳ ಹೊಲವನ್ನು ಮಾರಬಾರದು. ಏಕೆಂದರೆ ಅದು ಅವರಿಗೆ ಶಾಶ್ವತವಾದ ಸೊತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು