ಯೆಹೆಜ್ಕೇಲನು 48:15 - ಕನ್ನಡ ಸಮಕಾಲಿಕ ಅನುವಾದ15 “ಸುಮಾರು ಎರಡೂವರೆ ಕಿಲೋಮೀಟರ್ ಅಗಲ ಮತ್ತು ಸುಮಾರು ಹದಿಮೂರು ಕಿಲೋಮೀಟರ್ ಉದ್ದದ ಉಳಿದ ಪ್ರದೇಶವು ನಗರದ ಸಾಮಾನ್ಯ ಬಳಕೆಗಾಗಿ, ಇದು ಮನೆಗಳು ಮತ್ತು ಹುಲ್ಲುಗಾವಲುಗಳನ್ನು ಹೊಂದಿರುತ್ತದೆ. ನಗರವು ಅದರ ಮಧ್ಯದಲ್ಲಿ ಇರುತ್ತದೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಪ್ಪತ್ತೈದು ಸಾವಿರ ಮೊಳ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ ಮೀಸಲು ಪಾಲಿನ ಒಟ್ಟು ಅಳತೆಯಲ್ಲಿ ಉಳಿದ ಐದು ಸಾವಿರ ಮೊಳ ಅಗಲದ ಭೂಮಿಯು ಮೀಸಲಿಲ್ಲವೆಂದೆಣಿಸಿ ಪಟ್ಟಣಕ್ಕೆ ಅಂದರೆ ಜನರ ನಿವಾಸಕ್ಕೂ ಮತ್ತು ಸುತ್ತಣ ಪ್ರದೇಶಕ್ಕೂ ಪ್ರತ್ಯೇಕಿಸಲ್ಪಡಲಿ. ಪಟ್ಟಣವು ಅದರ ಮಧ್ಯದಲ್ಲಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹನ್ನೆರಡುವರೆ ಕಿಲೋಮೀಟರ್ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ, (ಮೀಸಲುಪಾಲಿನ ಒಟ್ಟಳತೆಯಲ್ಲಿ), ಮಿಕ್ಕ ಎರಡುವರೆ ಕಿಲೋಮೀಟರ್ ಅಗಲದ ಭೂಮಿ ಮೀಸಲಿಲ್ಲವೆಂದೆಣಿಸಿ, ರಾಜಧಾನಿಗೆ ಅಂದರೆ, ಜನರ ನಿವಾಸಕ್ಕೂ ಸುತ್ತಣ ಪ್ರದೇಶಕ್ಕೂ ಪ್ರತ್ಯೇಕವಾಗಿರಲಿ. ರಾಜಧಾನಿ ಅದರ ಮಧ್ಯದಲ್ಲಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಪ್ಪತ್ತೈದು ಸಾವಿರ ಮೊಳ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ [ಮೀಸಲುಪಾಲಿನ ಒಟ್ಟಳತೆಯಲ್ಲಿ] ವಿುಕ್ಕ ಐದು ಸಾವಿರ ಮೊಳ ಅಗಲದ ಭೂವಿುಯು ಮೀಸಲಲ್ಲವೆಂದೆಣಿಸಿ ರಾಜಧಾನಿಗೆ ಅಂದರೆ ಜನರ ನಿವಾಸಕ್ಕೂ ಸುತ್ತಣ ಪ್ರದೇಶಕ್ಕೂ ಪ್ರತ್ಯೇಕಿಸಲ್ಪಡಲಿ, ರಾಜಧಾನಿಯು ಅದರ ಮಧ್ಯದಲ್ಲಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಯಾಜಕರಿಗೆ ಮತ್ತು ಲೇವಿಯರಿಗೆ ಸ್ಥಳ ಕೊಟ್ಟ ಮೇಲೆ ಇನ್ನೂ ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಐದು ಸಾವಿರ ಮೊಳ ಅಗಲದ ಒಂದು ತುಂಡು ಜಾಗ ಉಳಿಯುವದು. ಈ ಜಾಗವು ನಗರವನ್ನು ಕಟ್ಟುವುದಕ್ಕಾಗಿ; ಪಶುಗಳ ಹುಲ್ಲುಗಾವಲಿಗಾಗಿ ಮತ್ತು ಮನೆಗಳನ್ನು ಕಟ್ಟುವುದಕ್ಕಾಗಿ ಇರುವದು. ಸಾಮಾನ್ಯ ಜನರು ಈ ಜಾಗವನ್ನು ಉಪಯೋಗಿಸಬಹುದು. ನಗರವು ಇದರ ಮಧ್ಯದಲ್ಲಿ ಇರುವದು. ಅಧ್ಯಾಯವನ್ನು ನೋಡಿ |