ಯೆಹೆಜ್ಕೇಲನು 48:18 - ಕನ್ನಡ ಸಮಕಾಲಿಕ ಅನುವಾದ18 ಕಾಣಿಕೆಯಾದ ಪರಿಶುದ್ಧಭಾಗಕ್ಕೆ ಎದುರಾಗಿರುವಂಥದ್ದೂ ಉದ್ದದಲ್ಲಿ ಉಳಿದ ಭೂಮಿಯು ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧಭಾಗಕ್ಕೆ ಎದುರಾಗಿರಬೇಕು. ಅದರ ಆದಾಯವು ಪಟ್ಟಣದಲ್ಲಿ ಸೇವೆಮಾಡುವವರ ಆಹಾರಕ್ಕಾಗುವಷ್ಟು ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪಟ್ಟಣವನ್ನು ಹೊರತುಪಡಿಸಿ, ಅದಕ್ಕೆ ಒಳಪಟ್ಟ ಉಳಿದ ಭೂಮಿಯ ಉದ್ದವು ಮೀಸಲಾದ ಪವಿತ್ರ ಕ್ಷೇತ್ರದ ಪಕ್ಕದಲ್ಲಿ ಪೂರ್ವದ ಕಡೆಗೆ ಹತ್ತು ಸಾವಿರ ಮೊಳವು, ಪಶ್ಚಿಮದ ಕಡೆಗೆ ಹತ್ತು ಸಾವಿರ ಮೊಳವು ಆಗಿರಬೇಕು. ಆ ಭೂಮಿಯು ಮೀಸಲಾದ ಪವಿತ್ರ ಕ್ಷೇತ್ರದ ಮೇರೆಯನ್ನು ಅನುಸರಿಸುವುದು. ಅದರ ಉತ್ಪತ್ತಿಯು ಆ ಪಟ್ಟಣದ ನಿವಾಸಿಗಳಿಗೆ ಆಹಾರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ರಾಜಧಾನಿ ಹೊರತು ಅದಕ್ಕೆ ಒಳಪಟ್ಟ ಮಿಕ್ಕ ಭೂಮಿಯ ಉದ್ದ ಮೀಸಲಾದ ಪವಿತ್ರಕ್ಷೇತ್ರದ ಪಕ್ಕದಲ್ಲಿ ಪೂರ್ವದ ಕಡೆ ಐದು ಕಿಲೋಮೀಟರ್, ಪಶ್ಚಿಮದ ಕಡೆ ಐದು ಕಿಲೋಮೀಟರ್. ಆ ಭೂಮಿ ಮೀಸಲಾದ ಪವಿತ್ರ ಕ್ಷೇತ್ರದ ಎಲ್ಲೆಯನ್ನು ಅನುಸರಿಸಿರುವುದು; ಅದರ ಉತ್ಪತ್ತಿಯು ಅದನ್ನು ಕೃಷಿಮಾಡುವ ಆ ಪುರನಿವಾಸಿಗಳಿಗೆ ಆಹಾರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ರಾಜಧಾನಿ ಹೊರತು ಅದಕ್ಕೆ ಒಳಪಟ್ಟ ವಿುಕ್ಕ ಭೂವಿುಯ ಉದ್ದವು ಮೀಸಲಾದ ಪವಿತ್ರಕ್ಷೇತ್ರದ ಪಕ್ಕದಲ್ಲಿ ಮೂಡಲ ಕಡೆ ಹತ್ತು ಸಾವಿರ ಮೊಳ, ಪಡುವಲ ಕಡೆ ಹತ್ತು ಸಾವಿರ ಮೊಳ; ಆ ಭೂವಿುಯು ಮೀಸಲಾದ ಪವಿತ್ರಕ್ಷೇತ್ರದ ಎಲ್ಲೆಯನ್ನು ಅನುಸರಿಸಿರುವದು; ಅದರ ಉತ್ಪತ್ತಿಯು ಅದನ್ನು ಗೆಯ್ಯುವ ಆ ಪುರನಿವಾಸಿಗಳಿಗೆ ಆಹಾರವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ವಿಶೇಷವಾದ ಪ್ರದೇಶದಲ್ಲಿ ಉಳಿದ ಸ್ಥಳದ ಪೂರ್ವಕ್ಕೆ ಹತ್ತು ಸಾವಿರ ಮೊಳ ಮತ್ತು ಪಶ್ಚಿಮಕ್ಕೆ ಹತ್ತು ಸಾವಿರ ಮೊಳ. ಈ ಸ್ಥಳವು ಭೂಪ್ರದೇಶದ ಪವಿತ್ರ ಭಾಗದ ಪಕ್ಕದಲ್ಲಿರುತ್ತದೆ. ನಗರದ ಕೆಲಸಗಾರರಿಗೆ ಬೆಳೆಗಳನ್ನು ಬೆಳೆಯಿಸುವುದಕ್ಕಾಗಿ ಈ ಸ್ಥಳವಿರುತ್ತದೆ. ಅಧ್ಯಾಯವನ್ನು ನೋಡಿ |