Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:28 - ಕನ್ನಡ ಸಮಕಾಲಿಕ ಅನುವಾದ

28 ಗಾದಿನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಗಾದನ್ ಮೇರೆಯು ದಕ್ಷಿಣದ ಕಡೆಯಲ್ಲಿ, ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ, (ಐಗುಪ್ತದ ಮುಂದಣ) ನದಿಯ ಮಾರ್ಗವಾಗಿ ಮಹಾ ಸಮುದ್ರಕ್ಕೆ ಸೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಗಾದಿನ ತೆಂಕಣ ಸರಹದ್ದಿನಲ್ಲಿ ನಾಡಿನ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ ಈಜಿಪ್ಟಿನ ಮುಂದಣ ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಗಾದಿನ ತೆಂಕಣ ಸರಹದ್ದಿನಲ್ಲಿ ದೇಶದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್‍ಕಾದೇಶಿನ ಹಳ್ಳವನ್ನು ದಾಟಿ [ಐಗುಪ್ತದ ಮುಂದಣ] ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ದೇವರ ಪ್ರಾಂತ್ಯದ ದಕ್ಷಿಣದ ಮೇರೆಯು ತಾಮಾರಿನಿಂದ ಪ್ರಾರಂಭವಾಗಿ ಮೆರೀಬೋತ್‌ಕಾದೇಶ್ ಎಂಬ ಮರುಭೂಮಿಯ ನೀರಿನಾಶ್ರಯಕ್ಕೆ ಹೋಗುತ್ತದೆ. ಅನಂತರ ಈಜಿಪ್ಟಿನ ನದಿಯ ಅಂಚಿನಲ್ಲಿ ಮುಂದುವರಿದು ಭೂಮಧ್ಯ ಸಮುದ್ರಕ್ಕೆ ತಾನು ಸೇರುವ ಸ್ಥಳಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:28
12 ತಿಳಿವುಗಳ ಹೋಲಿಕೆ  

“ಇದೇ ದೇಶದ ಮೇರೆಯು: “ಉತ್ತರದ ಕಡೆಗೆ ಮಹಾ ಸಮುದ್ರದಿಂದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಲೆಬೊ ಹಮಾತ್ ದಾಟಿ ಚೆದಾದಿಗೆ ಸೇರುವವರೆಗೂ;


ಆಗ ಕೆಲವರು ಬಂದು ಯೆಹೋಷಾಫಾಟನಿಗೆ, “ಅರಾಮಿನ ಈಚೆಯಲ್ಲಿರುವ ಲವಣ ಸಮುದ್ರದ ಆಚೆಯಿಂದ ನಿನಗೆ ವಿರೋಧವಾಗಿ ಮಹಾ ಸಮೂಹವೊಂದು ಬರುತ್ತದೆ. ಅವರು ಏನ್ಗೆದಿ ಎಂಬ ಹಜಜೋನ್ ತಾಮಾರಿನಲ್ಲಿ ಇದ್ದಾರೆ,” ಎಂದು ತಿಳಿಸಿದರು.


ಏನ್ಗೆದಿ ಮೊದಲುಗೊಂಡು ಎನ್ ಎಗ್ಲಯಿಮಿನವರೆಗೂ ಬೆಸ್ತರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವುವು. ಅದರ ಮೀನುಗಳು ಮಹಾಸಾಗರದ ಮೀನುಗಳಾಗಿ ಜಾತ್ಯಾನುಸಾರವಾಗಿ ಬಹಳವಾಗಿರುವುವು.


ಇಸ್ರಾಯೇಲರೇ, ಯೆಹೋವ ದೇವರು ಯೂಫ್ರೇಟೀಸ್ ನದಿ ಮೊದಲುಗೊಂಡು ಈಜಿಪ್ಟ್ ದೇಶದ ನದಿಯವರೆಗೆ ಹೊಡೆಯುವರು, ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಕೂಡಿಸುವರು.


ಮೆರೀಬಾದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಅಲ್ಲಿ ಅವರ ನಿಮಿತ್ತ ಮೋಶೆಗೆ ಕೇಡು ಬಂತು.


ಈಜಿಪ್ಟಿಗೆ ಎದುರಾದ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗೂ ಅಂದರೆ, ಗಾಜಾ, ಅಷ್ಡೋದ್, ಅಷ್ಕೆಲೋನ್, ಗಾತ್, ಎಕ್ರೋನ್ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ದಕ್ಷಿಣ ಪ್ರಾಂತ್ಯದಲ್ಲಿದ್ದ ಅವ್ವೀಯರ ಸೀಮೆ;


ಅಚ್ಮೋನಿನಿಂದ ಈಜಿಪ್ಟಿನ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.


ಇಸ್ರಾಯೇಲರು ಯೆಹೋವ ದೇವರ ಸಂಗಡ ವ್ಯಾಜ್ಯವಾಡಿದ್ದಕ್ಕಾಗಿ ದೇವರು ಅವರಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾ ಸ್ಥಳದ ನೀರು ಇದೇ.


ಇಸ್ರಾಯೇಲರ ಸರ್ವ ಸಮೂಹದವರು ಚಿನ್ ಎಂಬ ಮರುಭೂಮಿಗೆ ಮೊದಲನೆಯ ತಿಂಗಳಿನಲ್ಲಿ ಬಂದರು. ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಮರಣಹೊಂದಿದಳು, ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ಅವರು ಹಿಂದಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು, ಅಮಾಲೇಕ್ಯರ ಎಲ್ಲಾ ಬಯಲನ್ನು ಹಜಜೋನ್ ತಾಮಾರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು