Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:35 - ಕನ್ನಡ ಸಮಕಾಲಿಕ ಅನುವಾದ

35 “ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ’ ” ಎಂಬುದೇ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳ; ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ಯೆಹೋವನ ನೆಲೆ ಎಂಬ ಹೆಸರಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ನಗರದ ಸುತ್ತಳತೆಯು ಹದಿನೆಂಟು ಸಾವಿರ ಮೊಳ. ಇಂದಿನಿಂದ ಈ ನಗರದ ಹೆಸರು ‘ಯೆಹೋವನು ಅಲ್ಲಿದ್ದಾನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:35
33 ತಿಳಿವುಗಳ ಹೋಲಿಕೆ  

ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.


“ಚೀಯೋನ್ ಪುತ್ರಿಯೇ, ಹಾಡಿ ಹರ್ಷಿಸು. ಏಕೆಂದರೆ, ನಾನು ಬರುವೆನು ಮತ್ತು ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


ಆ ಕಾಲ ಬಂದಾಗ ಯೆರೂಸಲೇಮನ್ನೇ, ‘ಯೆಹೋವ ದೇವರ ಸಿಂಹಾಸನ,’ ಎಂದು ಕರೆಯುವರು. ನನ್ನ ನಾಮ ಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದು ಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ನಾನು ಅವರ ಮುಗ್ಧ ರಕ್ತಕ್ಕೆ ಪ್ರತೀಕಾರ ತೀರಿಸದೆ ಬಿಡಬೇಕೇ? ಇಲ್ಲ, ನಾನು ಎಂದಿಗೂ ಬಿಡುವುದಿಲ್ಲ. ಯೆಹೋವ ದೇವರು ಚೀಯೋನಿನಲ್ಲಿ ವಾಸವಾಗಿರುತ್ತಾರೆ.


ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು.


ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”


“ ‘ಯೆಹೋವ ದೇವರು ಅವುಗಳಲ್ಲಿದ್ದರೂ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನ ವಶವಾಗುವುವು. ಎಂದೂ ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವ ದೇವರೇ, ನೀವು ನಮ್ಮ ಮಧ್ಯದಲ್ಲಿರುತ್ತೀರಿ, ನಾವು ನಿಮ್ಮ ಹೆಸರನ್ನು ಹೊಂದಿದ್ದೇವೆ, ನಮ್ಮನ್ನು ಕೈಬಿಡಬೇಡಿರಿ.


“ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯ ಸ್ಥಳವಾಗಿರುವುದು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ; ಇಲ್ಲಿಯೇ ಸಿಂಹಾಸನಾರೂಢನಾಗಿರುವೆನು.


ದೇವರೇ, ನಿಮ್ಮ ಮಾರ್ಗಗಳು ಪರಿಶುದ್ಧವಾದವುಗಳು. ನಮ್ಮ ದೇವರ ಹಾಗೆ ಮಹಾ ದೇವರು ಯಾರು?


ಗಿದ್ಯೋನನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ, “ಯೆಹೋವ ಶಾಲೋಮ್” ಎಂದು ಅದಕ್ಕೆ ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಒಫ್ರದಲ್ಲಿ ಇನ್ನೂ ಇದೆ.


ಇದಾದ ಮೇಲೆ ಮೋಶೆ ಬಲಿಪೀಠವನ್ನು ಕಟ್ಟಿ, ಅದಕ್ಕೆ “ಯೆಹೋವ ನಿಸ್ಸೀ,” ಎಂದು ಹೆಸರಿಟ್ಟನು.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ.


ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಪ್ರತಿಯೊಂದು ಪಾತ್ರೆಯು ಸೇನಾಧೀಶ್ವರ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು. ಆ ದಿವಸದಲ್ಲಿ, ಕಾನಾನ್ಯನು ಸೇನಾಧೀಶ್ವರ ಯೆಹೋವ ದೇವರ ಆಲಯದಲ್ಲಿ ಇನ್ನು ಮೇಲೆ ಇರುವುದೇ ಇಲ್ಲ.


ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ, ಯೆಹೋವ ದೇವರು ತಿರುಗಿಬೀಳುವವರ ಮಧ್ಯದಲ್ಲಿ ಸಹ ನಿವಾಸಿಸುವಂತೆ ಆ ತಿರುಗಿಬಿದ್ದ ಮನುಷ್ಯರಿಂದ ದಾನಗಳನ್ನು ಅಂಗೀಕರಿಸಿದ್ದೀರಿ.


ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.


ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ. ದೇವರು ತಾವೇ ಅದರ ಭದ್ರಕೋಟೆಯಾಗಿದ್ದಾರೆ.


ದೇವರು ಅದರ ಮಧ್ಯದಲ್ಲಿ ಇದ್ದಾರೆ, ಅದು ಕದಲದು; ದೇವರು ಉದಯಕಾಲದಲ್ಲಿ ಅದಕ್ಕೆ ಸಹಾಯ ಮಾಡುವರು.


ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.


ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?


ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಪಶ್ಚಿಮದಲ್ಲಿ ಮೂರು ಬಾಗಿಲುಗಳಿರುತ್ತವೆ: ಒಂದು ಗಾದ್ ಬಾಗಿಲು, ಇನ್ನೊಂದು ಆಶೇರ್ ಬಾಗಿಲು, ಮತ್ತೊಂದು ನಫ್ತಾಲಿ ಬಾಗಿಲು.


“ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. ಅರಸನ ಜಯಧ್ವನಿಯು ಅವರಲ್ಲಿ ಉಂಟು.


ದಾವೀದನು, “ಇಸ್ರಾಯೇಲಿನ ದೇವರಾದ ಯೆಹೋವ ದೇವರು, ಅವರು ಯುಗಯುಗಾಂತರಕ್ಕೂ ಯೆರೂಸಲೇಮಿನಲ್ಲಿ ವಾಸಿಸುವ ಹಾಗೆ ತಮ್ಮ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದು ಹೇಳಿ,


ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ.


ದೇವರ ಪಟ್ಟಣವೇ, ನಿನ್ನ ವಿಷಯವಾದ ಮಹಿಮೆಯು ಏನೆಂದರೆ,


ಇದಾದ ಮೇಲೆ ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿರುವುದು. ನಾನು ಅವರನ್ನು ನೆಲೆಗೊಳಿಸಿ ವೃದ್ಧಿಗೊಳಿಸುವೆನು. ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.


ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಯೆಹೋವ ದೇವರಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಎಲ್ಲಾ ದೇಶದ ಜನಾಂಗಗಳು ಸಹ ತಿಳಿದುಕೊಳ್ಳುವರು.’ ”


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಚೀಯೋನಿಗೆ ನಾನು ತಿರುಗಿಕೊಂಡು, ನಾನು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು. ಆಗ ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೇನಾಧೀಶ್ವರ ಯೆಹೋವ ದೇವರ ಪರ್ವತವು ಪರಿಶುದ್ಧ ಪರ್ವತವೆಂದೂ ಕರೆಯಿಸಿಕೊಳ್ಳುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು