ಯೆಹೆಜ್ಕೇಲನು 5:11 - ಕನ್ನಡ ಸಮಕಾಲಿಕ ಅನುವಾದ11 ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವದಾಣೆ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತ್ವವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವೆ. ನಾನು ನಿನಗೆ ಕನಿಕರತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು. ಅಧ್ಯಾಯವನ್ನು ನೋಡಿ |