ಯೆಹೆಜ್ಕೇಲನು 5:2 - ಕನ್ನಡ ಸಮಕಾಲಿಕ ಅನುವಾದ2 ಅದರ ಮೂರನೆಯ ಒಂದು ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು. ಮೂರನೆಯ ಒಂದು ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು. ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಖಡ್ಗವನ್ನು ಬೀಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; (ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮುತ್ತಿಗೆಯ ದಿನಗಳು ತೀರಿದಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರು (ಹಾಗೆಯೇ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು). ಅಧ್ಯಾಯವನ್ನು ನೋಡಿ |