Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:8 - ಕನ್ನಡ ಸಮಕಾಲಿಕ ಅನುವಾದ

8 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ, ನಿನಗೆ ವಿರೋಧವಾಗಿದ್ದೇನೆ. ಜನಾಂಗಗಳ ಕಣ್ಣುಗಳ ಮುಂದೆ ನಿಮ್ಮ ಜನರನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದುದರಿಂದ ಯೆರೂಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಗೋ, ನಾನೇ ನಿನಗೆ ವಿರುದ್ಧನಾಗಿದ್ದೇನೆ, ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮಗೆ ವಿರೋಧವಾಗಿದ್ದೇನೆ. ಬೇರೆ ಜನರ ಕಣ್ಣೆದುರಿನಲ್ಲಿಯೇ ನಿಮ್ಮನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:8
30 ತಿಳಿವುಗಳ ಹೋಲಿಕೆ  

ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.


‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.


‘ಇಸ್ರಾಯೇಲ್ ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರಗೆ ತೆಗೆದು, ನಿನ್ನೊಳಗಿರುವ ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವೆನು.


ಇಗೋ, ತಗ್ಗಿನ ನಗರಿಯೇ, ಬಯಲಿನ ಬಂಡೆಯಲ್ಲಿ ವಾಸಮಾಡುವವರೇ, “ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರುವರೆಂದು, ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.


ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


“ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು, ರೋಷ್, ಮೆಷೆಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಿನಗೆ ನಾನು ವಿರೋಧವಾಗಿದ್ದೇನೆ.


ಅದಕ್ಕೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.


ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.


ನಾನು ನಿಮ್ಮನ್ನು ಪಟ್ಟಣದ ಮಧ್ಯದಿಂದ ಹೊರಗೆ ತಂದು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನ್ಯಾಯತೀರ್ಪುಗಳನ್ನು ನಡೆಸುವೆನು.


ನಿಶ್ಚಯವಾಗಿ ಅವರು ನನಗೆ ವಿರೋಧವಾಗಿ ತಿರುಗಿದ್ದಾರೆ. ಅವರು ದಿನವೆಲ್ಲಾ ತಮ್ಮ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾರೆ.


ಕರ್ತದೇವರು ಶತ್ರುವಿನಂತೆ ಆಗಿ, ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾರೆ. ಕರ್ತದೇವರು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾರೆ. ಯೆಹೂದದ ದುಃಖವನ್ನೂ, ಪ್ರಲಾಪವನ್ನೂ ಹೆಚ್ಚಿಸಿದ್ದಾರೆ.


ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ಎದುರಾಳಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ; ಏಕೆಂದರೆ ನೀತಿಯ ನಿವಾಸವಾದ ಯೆಹೋವ ದೇವರಿಗೆ, ಹೌದು, ಅವರ ಪೂರ್ವಜರ ನಿರೀಕ್ಷೆಯಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ,’ ಎಂದುಕೊಂಡರು.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


ಹೀಗೆ ನಾನು ಕೋಪದಿಂದಲೂ, ರೋಷದಿಂದಲೂ, ಉಗ್ರಖಂಡನೆಯಿಂದಲೂ ನಿಮ್ಮಲ್ಲಿ ನ್ಯಾಯತೀರ್ಪುಗಳನ್ನು ನಡೆಸುವಾಗ, ನಿಮ್ಮ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ, ದೂಷಣೆಯೂ, ಶಿಕ್ಷೆಯೂ, ಭಯವೂ ಆಗುವುದು. ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಸುಳ್ಳಾಗಿ ಮಾತನಾಡಿದ್ದರಿಂದಲೂ, ಸುಳ್ಳನ್ನು ದರ್ಶಿಸಿದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನು. ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಹೀಗೆ ನಾನು ಈಜಿಪ್ಟನ್ನು ದಂಡಿಸುವೆನು. ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ. ನನ್ನ ಮಂದೆಯನ್ನು ಅವರ ಕೈಯಿಂದ ವಿಚಾರಿಸುವೆನು. ಅವರು ಮಂದೆ ಮೇಯಿಸುವುದನ್ನು ನಿಲ್ಲಿಸಿಬಿಡುತ್ತೇನೆ, ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳರು. ಏಕೆಂದರೆ ನಾನು ನನ್ನ ಮಂದೆಯನ್ನು ಅವರಿಗೆ ಆಹಾರವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಹೊಗೆಯಾಗಲು ಸುಡುತ್ತೇನೆ. ಖಡ್ಗವು ನಿನ್ನ ಎಳೆಯ ಸಿಂಹಗಳನ್ನು ನುಂಗಿಬಿಡುವುದು. ನಿನಗೆ ಸಿಕ್ಕಿದ ಬೇಟೆಯನ್ನು ಭೂಮಿಯ ಮೇಲಿನಿಂದ ತೆಗೆದುಬಿಡುತ್ತೇನೆ. ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.”


ಅವರು ನಿನ್ನ ಮನೆಗಳನ್ನು ಸುಟ್ಟು, ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯತೀರಿಸುವರು. ನೀನು ವ್ಯಭಿಚಾರ ಮಾಡುವುದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯರಿಗೆ ಕೂಲಿ ಸಹ ಕೊಡುವುದನ್ನು ನಿಲ್ಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು