ಯೆಹೆಜ್ಕೇಲನು 6:13 - ಕನ್ನಡ ಸಮಕಾಲಿಕ ಅನುವಾದ13 ಆಮೇಲೆ ಅವರಲ್ಲಿ ಹತರಾದವರು, ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಬಲಿಪೀಠಗಳ ಸುತ್ತಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ, ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸಿರಾದ ಮರದ ಕೆಳಗೂ, ಪ್ರತಿಯೊಂದು ದಪ್ಪವಾದ ಏಲಾ ಮರದ ಕೆಳಗಡೆಯೂ, ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವುದರಲ್ಲಿಯೂ ನಾನೇ ಯೆಹೋವ ದೇವರೆಂದು ತಿಳಿಯುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೆ, ಎಲ್ಲಾ ಬೆಟ್ಟಗಳ ತುದಿಗಳಲ್ಲಿ, ಸೊಂಪಾದ ಎಲ್ಲಾ ಮರಗಳ ಕೆಳಗೆ ಹಾಗು ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಮರಗಳ ಕೆಳಗೆ ಹತರಾಗಿ, ತಮ್ಮ ಯಜ್ಞವೇದಿಕೆಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿ |
ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.