ಯೆಹೆಜ್ಕೇಲನು 6:2 - ಕನ್ನಡ ಸಮಕಾಲಿಕ ಅನುವಾದ2 “ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು, ಅವುಗಳಿಗೆ ವಿರೋಧವಾಗಿ ಹೀಗೆ ಪ್ರವಾದಿಸು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು, ಅವುಗಳನ್ನು ಕುರಿತು ಪ್ರವಾದಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನರಪುತ್ರನೇ, ಇಸ್ರಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆತನು ಹೇಳಿದ್ದೇನೆಂದರೆ, “ನರಪುತ್ರನೇ, ಇಸ್ರೇಲಿನ ಪರ್ವತಗಳ ಕಡೆಗೆ ಮುಖ ಮಾಡು. ಅವುಗಳ ವಿರುದ್ಧವಾಗಿ ನನಗೋಸ್ಕರ ಮಾತನಾಡಿ ಹೀಗೆ ಹೇಳು: ಅಧ್ಯಾಯವನ್ನು ನೋಡಿ |
‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”