Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:3 - ಕನ್ನಡ ಸಮಕಾಲಿಕ ಅನುವಾದ

3 ‘ಇಸ್ರಾಯೇಲಿನ ಪರ್ವತಗಳೇ, ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಹೌದು, ಸಾರ್ವಭೌಮ ಯೆಹೋವ ದೇವರು ಪರ್ವತಗಳಿಗೂ ಗುಡ್ಡಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳುತ್ತಾರೆ, ನಾನೇ ನಿಮ್ಮ ಮೇಲೆ ಖಡ್ಗವನ್ನು ಹಿಡಿದು, ನಿಮ್ಮ ಪೂಜಾಸ್ಥಳಗಳನ್ನು ನಾಶಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ‘ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ‘ಇಸ್ರಯೇಲಿನ ಬೆಟ್ಟಗಳೇ, ಸರ್ವೇಶ್ವರನಾದ ದೇವರ ಈ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಬೆಟ್ಟಗುಡ್ಡಗಳಿಗೂ ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾರೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ ತೊರೆ ತಗ್ಗುಗಳಿಗೂ ಹೀಗೆ ಹೇಳುತ್ತಾನೆ - ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ‘ಇಸ್ರೇಲಿನ ಪರ್ವತಗಳೇ, ನನ್ನ ಒಡೆಯನಾದ ಯೆಹೋವನ ಸಂದೇಶಕ್ಕೆ ಕಿವಿಗೊಡಿರಿ. ಬೆಟ್ಟಗಳಿಗೂ ಪರ್ವತಗಳಿಗೂ ಕೊರಕಲುಗಳಿಗೂ ಕಣಿವೆಗಳಿಗೂ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಾನು ವೈರಿಯನ್ನು ನಿಮ್ಮ ವಿರುದ್ಧ ಯುದ್ಧ ಮಾಡಲು ಕಳುಹಿಸುವೆನು. ನಿಮ್ಮ ಎಲ್ಲಾ ಉನ್ನತ ಸ್ಥಳಗಳನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:3
14 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.


ಬೆಟ್ಟಗಳೇ, ಯೆಹೋವ ದೇವರ ಆಪಾದನೆಯನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ ಕಿವಿಗೊಡಿರಿ. ಏಕೆಂದರೆ ಯೆಹೋವ ದೇವರಿಗೆ ತಮ್ಮ ಜನರ ವಿರುದ್ಧ ವ್ಯಾಜ್ಯವಿದೆ, ಅವರು ಇಸ್ರಾಯೇಲಿನ ವಿರುದ್ಧ ಆರೋಪಿಸುತ್ತಾರೆ.


“ ‘ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹರಡಿಸಿ ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವಿರಿ. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.


ಓ ದೇಶವೇ, ದೇಶವೇ, ದೇಶವೇ, ಯೆಹೋವ ದೇವರ ವಾಕ್ಯವನ್ನು ಕೇಳು.


ನಿಶ್ಚಯವಾಗಿ ಗುಡ್ಡಗಳಿಂದಲೂ, ಬೆಟ್ಟಗಳ ಸಮೂಹದಿಂದಲೂ ನಮಗೆ ಮೋಸವಾಗಿದೆ. ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವ ದೇವರಲ್ಲಿಯೇ ಇದೆ.


ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.


“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.


ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.


ಮಹಾ ಸಂಹಾರದ ದಿವಸದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು ನೀರಿನ ಕಾಲುವೆಗಳೂ ಹರಿಯುತ್ತಿರುವುವು.


ಒಡಂಬಡಿಕೆಯನ್ನು ಮುರಿದದ್ದಕ್ಕಾಗಿ, ಮುಯ್ಯಿಗೆ ಮುಯ್ಯಿ ತೀರಿಸುವ ಖಡ್ಗವನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಸೇರಿದಾಗ, ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನಿಮ್ಮನ್ನು ಶತ್ರುವಿನ ಕೈಗೆ ಒಪ್ಪಿಸಲಾಗುವುದು.


ಅವರು ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ, ಉನ್ನತ ಸ್ಥಳಗಳನ್ನೂ ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ, ಹಸುರಾದ ಪ್ರತಿ ಗಿಡದ ಕೆಳಗೂ ತಮಗಾಗಿ ಮಾಡಿಕೊಂಡರು.


“ಇಸಾಕನ ಉನ್ನತ ಪೂಜಾಸ್ಥಳಗಳು ನಾಶವಾಗುವುವು. ಇಸ್ರಾಯೇಲಿನ ಪರಿಶುದ್ಧ ಸ್ಥಳಗಳು ಹಾಳಾಗುವುವು. ನಾನು ಖಡ್ಗದೊಂದಿಗೆ ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು.”


ಯೆಹೋವ ದೇವರು ಹೇಳುವುದನ್ನು ಈಗ ಕೇಳಿರಿ, ಎದ್ದೇಳು, ಬೆಟ್ಟಗಳ ಮುಂದೆ ವ್ಯಾಜ್ಯವಾಡು; ನೀನು ಹೇಳುವುದನ್ನು ಗುಡ್ಡಗಳು ಕೇಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು