ಯೆಹೆಜ್ಕೇಲನು 6:6 - ಕನ್ನಡ ಸಮಕಾಲಿಕ ಅನುವಾದ6 ನೀವು ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳಾಗುವುವು. ಪೂಜಾ ಸ್ಥಳಗಳೂ ನಾಶವಾಗುವುವು. ಹೀಗೆ ನಿಮ್ಮ ಬಲಿಪೀಠಗಳು ಸಹ ನಾಶವಾಗಿ, ನಿಮ್ಮ ವಿಗ್ರಹಗಳು ಒಡೆದುಹೋಗಿ ಇಲ್ಲದಂತಾಗುವುವು. ನೀವು ರೂಪಿಸಿದ ಎಲ್ಲವೂ ಕಡಿದು ಬಿದ್ದು ಅಳಿದುಹೋಗುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “‘ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುದರಿಂದಲೂ, ಪೂಜಾ ಸ್ಥಳಗಳು ಪಾಳುಬೀಳುವುದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮ ಸೂರ್ಯಸ್ತಂಭಗಳು ಕಡಿಯಲ್ಪಡುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುವು; ಪೂಜಾಸ್ಥಳಗಳು ಪಾಳುಬೀಳುವುವು; ಇದರಿಂದ ನಿಮ್ಮ ಯಜ್ಞವೇದಿಕೆಗಳು ಹಾಳುಪಾಳಾಗುವುವು; ನಿಮ್ಮ ಬೊಂಬೆಗಳು ಪುಡಿಪುಡಿಯಾಗುವುವು; ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು; ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವದರಿಂದಲೂ ಪೂಜಾಸ್ಥಳಗಳು ಪಾಳು ಬೀಳುವದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳುಪಾಳಾಗುವವು, ನಿಮ್ಮ ಬೊಂಬೆಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮಸೂರ್ಯಸ್ತಂಭಗಳು ಕಡಿಯಲ್ಪಡುವವು, ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವವು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿಮ್ಮ ಜನರು ವಾಸಮಾಡುವಲ್ಲೆಲ್ಲಾ ಕೆಟ್ಟಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನ್ನು ಇನ್ನು ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದುಹೋಗುವವು. ಅಧ್ಯಾಯವನ್ನು ನೋಡಿ |